ಗುರುವಾರ , ಜನವರಿ 23, 2020
28 °C
ಕೊಡಗು ಕಾಂಗ್ರೆಸ್ ಜಿಲ್ಲಾ ಘಟಕ ಕರೆ

'ಪೌರತ್ವ' ವಿರೋಧಿಸಿ 30ರಂದು ಬೃಹತ್ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಡಿಕೇರಿ: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಪೌರತ್ವ (ತಿದ್ದುಪಡಿ) ಕಾಯ್ದೆ ವಿರೋಧಿಸಿ ಡಿ. 30ರಂದು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಕೊಡಗು ಕಾಂಗ್ರೆಸ್ ಜಿಲ್ಲಾ ಘಟಕ ಅಧ್ಯಕ್ಷ ಕೆ.ಕೆ ಮಂಜುನಾಥ್ ಹೇಳಿದರು.

ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಕಾಯ್ದೆ ಜಾತ್ಯತೀತ ನೆಲೆಗಟ್ಟಿನ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆ. ಮನುಷ್ಯ ಕುಲಕ್ಕೆ ಇದು ಮಾರಕ. ದೇಶದ ಮುಸ್ಲಿಂ ಸಮುದಾಯವರಲ್ಲಿ ಭಯ ಹುಟ್ಟಿಸಿ ಸಂಕಷ್ಟಕ್ಕೆ ಸಿಲುಕಿಸುವ ಹುನ್ನಾರ ಬಿಜೆಪಿ ನಡೆಸುತ್ತಿದೆ. ದೇಶದಲ್ಲಿ ಅವಿದ್ಯಾವಂತರು ಹಲವರಿದ್ದಾರೆ. ದಾಖಲೆ ವಂಚಿತರು ಪೌರತ್ವ ಪಡೆಯಲು ಸಾಧ್ಯವಾಗಲ್ಲ. ಆದ್ದರಿಂದ ಕೇಂದ್ರ ಸರ್ಕಾರ ಕಾಯ್ದೆಯನ್ನು ಕೈಬಿಡಬೇಕೆಂದು ಒತ್ತಾಯಿಸಿದರು.

ದೇಶದಲ್ಲಿ ದಿನದಿಂದ ದಿನಕ್ಕೆ ಆಹಾರ ಸಾಮಾಗ್ರಿಗಳ ಬೆಲೆ ಏರಿಕೆಯಾಗುತ್ತಿದೆ. ಇದರ ಬಗ್ಗೆ ಚಿಂತಿಸಬೇಕಾದ ಸರ್ಕಾರ ಜನರಿಗೆ ಬೇಡವಾದ ಕಾನೂನು ಜಾರಿಗೆ ತಂದು ಸರ್ವಾಧಿಕಾರಿ ಧೋರಣೆ ತೋರುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪಕ್ಷ ಸಂಘಟಿಸುವ ನಿಟ್ಟಿನಲ್ಲಿ ಬ್ಲಾಕ್ ಮಟ್ಟದ ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಯುವ ತಂಡದ ಮೂಲಕ ಪಕ್ಷ ಮತ್ತಷ್ಟು ಬಲಗೊಳ್ಳಲಿದೆ. ಪಕ್ಷದ ಕೆಲವರಲ್ಲಿ ಆಯ್ಕೆ ಬಗ್ಗೆ ಅಸಮಾಧಾನ ಇದ್ದು ಪಕ್ಷದ ವೇದಿಕೆಯಲ್ಲಿ ಎಲ್ಲವನ್ನು ಪರಿಹರಿಸಿಕೊಳ್ಳುತ್ತೇವೆ. ಪಕ್ಷದ ಪೂರ್ಣ ಪ್ರಮಾಣದ ಸಮಿತಿ ಶೀಘ್ರದಲ್ಲಿ ರಚನೆಗೊಳ್ಳಲಿದೆ ಎಂದು ಮಾಹಿತಿ ನೀಡಿದರು.

ಪತ್ರಿಕಾ ಗೋಷ್ಠಿಯಲ್ಲಿ ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂಪತ್ ಸೋಮಣ್ಣ, ನಾಪೋಕ್ಲು ಬ್ಲಾಕ್ ಅಧ್ಯಕ್ಷ ಇಸ್ಮಾಹಿಲ್, ಕುಶಾಲನಗರ ಬ್ಲಾಕ್ ಅಧ್ಯಕ್ಷ ಅನಂತ್ ಕುಮಾರ್, ವಿರಾಜಪೇಟೆ ಬ್ಲಾಕ್ ಅಧ್ಯಕ್ಷ ರಂಜಿ ಪೂಣಚ್ಚ, ಸೋಮವಾರಪೇಟೆ ಬ್ಲಾಕ್ ಅಧ್ಯಕ್ಷ ಬಿ.ಬಿ ಸತೀಶ್ ಹಾಜರಿದ್ದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು