ಶುಕ್ರವಾರ, 23 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಸ್ಟರ್ ಅಥ್ಲೆಟಿಕ್ಸ್: ಕುಸುಮಾವತಿಗೆ ಚಿನ್ನದ ಪದಕ

Published 15 ಜನವರಿ 2024, 15:27 IST
Last Updated 15 ಜನವರಿ 2024, 15:27 IST
ಅಕ್ಷರ ಗಾತ್ರ

ಗೋಣಿಕೊಪ್ಪಲು: ರಾಜ್ಯಮಟ್ಟದ ಮಾಸ್ಟರ್ ಅಥ್ಲೆಟಿಕ್ಸ್‌ನಲ್ಲಿ ಭಾಗವಹಿಸಿದ ಇಲ್ಲಿನ ಕೈಕೇರಿಯ ನಿವಾಸಿ ಹಾಗೂ ಸಾಮಾಜಿಕ ಕಾರ್ಯಕರ್ತೆ ಪಡಿಕಲ್ ಕುಸುಮಾವತಿ ಅವರು ಹಲವು ಪ್ರಶಸ್ತಿ ಪಡೆದಿದ್ದಾರೆ.

ಮಂಗಳೂರಿನಲ್ಲಿ ನಡೆದ 40ರ ವಯೋಮಾನದ ಮಾಸ್ಟರ್ ಅಥ್ಲೆಟಿಕ್ಸ್‌ನಲ್ಲಿ ‌ಕುಸುಮಾವತಿ ಅವರು 1500 ಮೀಟರ್ ಓಟದಲ್ಲಿ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ ಗಳಿಸಿದರು. 10 ಕಿ.ಮೀ ಹಾಗೂ 3 ಸಾವಿರ ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನ ಪಡೆದರು. 400 ಮೀಟರ್ ರಿಲೆಯಲ್ಲಿಯೂ ದ್ವಿತೀಯ ಸ್ಥಾನ ಗಳಿಸಿದರು.

ಹೊಸಕೋಟೆಯಲ್ಲಿ ನಡೆದ ಮಾಸ್ಟರ್ ಅಥ್ಲೆಟಿಕ್ಸ್‌ನ 10 ಕಿ.ಮೀ. ಓಟದಲ್ಲಿ ಪ್ರಥಮ, 5 ಸಾವಿರ ಮೀಟರ್ ಓಟದಲ್ಲಿ ಮತ್ತು 3 ಸಾವಿರ ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನ ಪಡೆದರು. ವಿಜಯಪುರ, ಹುಬ್ಬಳ್ಳಿಯಲ್ಲಿಯೂ ನಡೆದ ಮಾಸ್ಟರ್ ಅಥ್ಲೆಟಿಕ್ಸ್‌ನಲ್ಲಿ ಉತ್ತಮ ಪ್ರದರ್ಶನ ತೋರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT