ಗುರುವಾರ , ಮೇ 6, 2021
23 °C

ಕೊಡಗಿನಲ್ಲಿ ಧಾರಾಕಾರ ಮಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಡಿಕೇರಿ: ಕೊಡಗಿನಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಗುರುವಾರವೂ ಜಿಲ್ಲೆಯ ವಿವಿಧೆಡೆ ಧಾರಾಕಾರ ಮಳೆಯಾಗಿದೆ.

ನಾಪೋಕ್ಲು, ಸಿದ್ದಾಪುರ, ಭಾಗಮಂಡಲ, ಕಕ್ಕಬ್ಬೆ, ಕರಿಕೆ ಭಾಗದಲ್ಲಿ ಭಾರೀ ಮಳೆಯಾಗಿದೆ. ಸಿದ್ದಾಪುರ, ನೆಲ್ಯಹುದಿಕೇರಿ, ಕರಡಿಗೋಡು, ಗುಹ್ಯ ಭಾಗದಲ್ಲೂ ಜೋರು ಮಳೆಯಾಗಿದೆ. ಬುಧವಾರ ರಾತ್ರಿಯೂ ಕೊಡಗಿನಲ್ಲಿ ಧಾರಾಕಾರ ಮಳೆಯಾಗಿತ್ತು.

ಮಡಿಕೇರಿ–ಸೋಮವಾರಪೇಟೆ ರಾಜ್ಯ ಹೆದ್ದಾರಿಯಲ್ಲಿ ಗಾಳಿಗೆ ಬೃಹತ್‌ ಮರವೊಂದು ರಸ್ತೆ ಉರುಳಿ ಸಂಚಾರ ವ್ಯತ್ಯಯವಾಗಿತ್ತು. ಕಳೆದ ನಾಲ್ಕು ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು ನದಿ ಹಾಗೂ ಹೊಳೆಗಳಲ್ಲಿ ನೀರಿನ ಹರಿವು ಹೆಚ್ಚಳಗೊಂಡಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.