ಮಂಗಳವಾರ, ಡಿಸೆಂಬರ್ 1, 2020
19 °C
ಕೆಲಸ ಮಾಡದ ಸಚಿವರನ್ನು ಕೈಬಿಡುವಂತೆ ಆಗ್ರಹ

ರಾಜ್ಯ ನಾಯಕರು ನೀಡಿರುವ ಪಟ್ಟಿಗೆ ಮನ್ನಣೆ ಸಿಗಲ್ಲ: ರಂಜನ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಎಂ.ಪಿ.ಅಪ್ಪಚ್ಚು ರಂಜನ್‌

ಮಡಿಕೇರಿ: ‘ಕೆಲಸ ಮಾಡದ ಸಚಿವರನ್ನು ಕೈಬಿಟ್ಟು, ಮೂಲ ಬಿಜೆಪಿಯ ಹಿರಿಯ ಶಾಸಕರಿಗೆ ಸಂಪುಟ ಪುನರ್‌ ರಚನೆಯಲ್ಲಿ ಅವಕಾಶ ನೀಡಬೇಕು’ ಎಂದು ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್‌ ಶುಕ್ರವಾರ ಇಲ್ಲಿ ಆಗ್ರಹಿಸಿದರು.

‘ನಾಲ್ಕು ಬಾರಿ ಸಚಿವರಾದವರೇ ಮತ್ತೆ ಮತ್ತೆ ಸಚಿವರಾಗುತ್ತಿದ್ದಾರೆ. ನಾನು, ಉಮೇಶ್ ಕತ್ತಿ  ಹಲವು ಬಾರಿ ಗೆದ್ದಿದ್ದೇವೆ. ನಮಗೂ ಅವಕಾಶ ನೀಡಬೇಕು’ ಎಂದು ಒತ್ತಾಯಿಸಿದರು.

‘ರಾಜ್ಯ ಮುಖಂಡರು ನೀಡಿರುವ ಪಟ್ಟಿಯನ್ನು ಹೈಕಮಾಂಡ್ ಪರಿಗಣಿಸುವುದಿಲ್ಲ. ಹಿಂದಿನ ಚುನಾವಣೆಯ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ರಾಜ್ಯದಿಂದ ಕಳುಹಿಸಿದ್ದ ಪಟ್ಟಿಗೆ ಮನ್ನಣೆ ಸಿಕ್ಕಿಲ್ಲ. ಹೈಕಮಾಂಡ್, ಈಗಲೂ ಮೂಲ ಬಿಜೆಪಿ ಶಾಸಕರನ್ನು ಕೈಬಿಡದೇ ಪರಿಗಣಿಸಲಿದೆ ಎಂಬ ವಿಶ್ವಾಸವಿದೆ’ ಎಂದು ಪ್ರತಿಕ್ರಿಯಿಸಿದರು. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು