ಮಡಿಕೇರಿ: ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಅವರು ನ. 21 ಮತ್ತು 22 ರಂದು ಕೊಡಗು ಜಿಲ್ಲೆಗೆ ಭೇಟಿ ನೀಡಲಿದ್ದಾರೆ.

21 ರಂದು ಬೆಳಿಗ್ಗೆ 9.45ಕ್ಕೆ ಕುಶಾಲನಗರ ತಾಲ್ಲೂಕು ಮಸಗೋಡು-ಯಲಕನೂರು-ಕಣಿವೆ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

ನಂತರ ಬೆಳಿಗ್ಗೆ 11 ಗಂಟೆಗೆ ಕೊಡಗು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕೊಡಗು ಜಿಲ್ಲಾ ಮಟ್ಟದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಬಳಿಕ ಮಧ್ಯಾಹ್ನ 3 ಗಂಟೆಗೆ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ನಂತರ ಸಂಜೆ 5 ಗಂಟೆಗೆ ನಗರದ ಕ್ರಿಸ್ಟಲ್ ಹಾಲ್ನಲ್ಲಿ ಕಸ್ತೂರಿ ರಂಗನ್ ವರದಿ ವಿರೋಧ ಹೋರಾಟ ಸಮಿತಿಯು ಆಯೋಜಿಸಿರುವ ‘ಸಿ’ ಮತ್ತು ‘ಡಿ’ ಜಮೀನಿನ ಸಮಸ್ಯೆಗಳ ಕುರಿತು ಸಭೆ ನಡೆಸಲಿದ್ದಾರೆ.

22 ರಂದು ಬೆಳಿಗ್ಗೆ 10 ಗಂಟೆಗೆ ಕೊಡಗು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕರ್ನಾಟಕ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕುರಿತು ಕೊಡಗು ಜಿಲ್ಲಾ ಮಟ್ಟದ ‘ಗ್ಯಾರಂಟಿ ಕಾರ್ಯಾಗಾರ’ ಮತ್ತು ‘ಗ್ಯಾರಂಟಿ ಉತ್ಸವ’ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.