ಗುರುವಾರ , ಜೂನ್ 17, 2021
22 °C

ಕೊಡಗು: ಕೇರಳ ಗಡಿಭಾಗ ತೊಳ್ಪಟ್ಟಿಗೆ ಸಚಿವ ವಿ.ಸೋಮಣ್ಣ ಭೇಟಿ, ಪರಿಶೀಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಡಿಕೇರಿ: ಕೊಡಗು ಜಿಲ್ಲೆಯಲ್ಲೂ ದಿನದಿಂದ ದಿನಕ್ಕೆ ಕೋವಿಡ್‌ ಪ್ರಕರಣಗಳು ಹೆಚ್ಚುತ್ತಿದ್ದು, ಕೊಡಗು-ಕೇರಳ ಗಡಿಭಾಗ ತೊಳ್ಪಟ್ಟಿಗೆ ಶನಿವಾರ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರು ಭೇಟಿ ನೀಡಿ ವೀಕ್ಷಿಸಿದರು.

‘ಕೇರಳದಿಂದ ನಮ್ಮ ರಾಜ್ಯಕ್ಕೆ ಆಗಮಿಸುವ ಪ್ರತಿಯೊಬ್ಬರನ್ನೂ ಕೋವಿಡ್ ಪರೀಕ್ಷೆಗೆ ಒಳಪಡಿಸಬೇಕು. ಗಡಿಯಲ್ಲಿ ಬಿಗಿ ಕ್ರಮ ಕೈಗೊಳ್ಳಬೇಕು’ ಎಂದು ಸೂಚಿಸಿದರು.

‘ಕೊಡಗು ವೈದ್ಯಕೀಯ ವಿಜ್ಞಾನ ಕಾಲೇಜಿನಲ್ಲಿ 100, ವಿರಾಜಪೇಟೆ ತಾಲ್ಲೂಕು ಆಸ್ಪತ್ರೆಯಲ್ಲಿ 50, ಕುಟ್ಟ ಗ್ರಾಮದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 30, ಪಾಲಿಬೆಟ್ಟ ಸರ್ಕಾರಿ ಆಸ್ಪತ್ರೆಯಲ್ಲಿ 30, ಲೋಪಮುದ್ರ ಆಸ್ಪತ್ರೆಯಲ್ಲಿ 10 ಸೇರಿ ಜಿಲ್ಲೆಯಲ್ಲಿ ಒಟ್ಟು 220 ಹೆಚ್ಚುವರಿ ಆಮ್ಲಜನಕ ಸಹಿತ ಹಾಸಿಗೆ ವ್ಯವಸ್ಥೆ ಮಾಡಿಕೊಳ್ಳಲಾಗಿದೆ’ ಎಂದು ಸಚಿವರು ಮಾಹಿತಿ ನೀಡಿದರು. 

‘ಹೆಚ್ಚುವರಿಯಾಗಿ ಆರಂಭಿಸುವ ಆಮ್ಲಜನಕ ಸಹಿತ ಹಾಸಿಗೆಗೆ 650ರಿಂದ 700 ಜಂಬೋ ಸಿಲಿಂಡರ್‌ ಅಗತ್ಯವಿದೆ. ಆಮ್ಲಜನಕ ಪೂರೈಕೆಗೆ ತಕ್ಷಣವೇ ಕ್ರಮ ಕೈಗೊಳ್ಳಲಾಗುವುದು’ ಎಂದು ಹೇಳಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು