ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಲಕಿ ಮೇಲೆ ಅತ್ಯಾಚಾರ; 20 ವರ್ಷ ಕಠಿಣ ಶಿಕ್ಷೆ

Published 7 ಡಿಸೆಂಬರ್ 2023, 15:55 IST
Last Updated 7 ಡಿಸೆಂಬರ್ 2023, 15:55 IST
ಅಕ್ಷರ ಗಾತ್ರ

ಮಡಿಕೇರಿ: ಬಾಲಕಿಯೊಬ್ಬಳ ಮೇಲೆ ಅತ್ಯಾಚಾರ ಮಾಡಿದ ಆರೋಪದ ಮೇರೆಗೆ ಆನಂದ್‌ಕುಮಾರ್ (37) ಎಂಬಾತನಿಗೆ ವಿರಾಜಪೇಟೆಯಲ್ಲಿರುವ 2ನೇ ಹೆಚ್ಚುವರಿ ಮತ್ತು ಜಿಲ್ಲಾ ಸೆಷೆನ್ಸ್ ನ್ಯಾಯಾಲಯವು 20 ವರ್ಷ ಕಠಿಣ ಶಿಕ್ಷೆ ವಿಧಿಸಿದೆ.

ಈತ ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ 2017ರ ಜನವರಿಯಿಂದ ಜೂನ್‌ವರೆಗೆ  ನಿರಂತರವಾಗಿ ಅತ್ಯಾಚಾರ ಎಸಗಿದ್ದ. ನಂತರ, ದೊಣ್ಣೆಯಿಂದ ಹಲ್ಲೆ ಮಾಡಿ ಕೊಲೆ ಮಾಡುವುದಾಗಿ ಹೆದರಿಸಿ, ಬೇರೆ ಊರಿಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದ. ಈ ಕುರಿತು ಠಾಣೆಯಲ್ಲಿ ದೂರು ದಾಖಲಾಗಿತ್ತು. ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ವಿಚಾರಣೆ ನಡೆಸಿದ ನ್ಯಾಯಾಲಯವು ಅಪರಾಧಿಗೆ 20 ವರ್ಷಗಳ ಕಠಿಣ ಶಿಕ್ಷೆ ಹಾಗೂ ₹ 55 ಸಾವಿರ ದಂಡ ವಿಧಿಸಿದೆ ಎಂದು ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT