ಭಾನುವಾರ, 25 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೋಮವಾರಪೇಟೆ | ಪಂಚಾಯಿತಿಯ ₹ 16 ಲಕ್ಷ ದುರುಪಯೋಗ: ದೂರು

Published 14 ಜನವರಿ 2024, 14:17 IST
Last Updated 14 ಜನವರಿ 2024, 14:17 IST
ಅಕ್ಷರ ಗಾತ್ರ

ಸೋಮವಾರಪೇಟೆ: ತಾಲ್ಲೂಕಿನ ಐಗೂರು ಗ್ರಾಮ ಪಂಚಾಯಿತಿಯ ಮಹಿಳಾ ಸಿಬ್ಬಂದಿ ಸುಮಾರು ₹ 16 ಲಕ್ಷದಷ್ಟು ದುರುಪಯೋಗ ಮಾಡಿಕೊಂಡ ಪ್ರಕರಣ ನಡೆದಿದ್ದು, ದೂರು ದಾಖಲಾಗಿದೆ.

ಗ್ರಾಮ ಪಂಚಾಯಿತಿಯಲ್ಲಿ ಡೆಟಾ ಎಂಟ್ರಿ ಆಪರೇಟರ್ ಆಗಿ ಕಳೆದ 15 ವರ್ಷಗಳಿಂದ ಕೆಲಸ ಮಾಡುತ್ತಿರುವ ಸರಿತಾ ಎಂಬುವರು ಹಣವನ್ನು ತನ್ನ ವೈಯಕ್ತಿಕ ಖಾತೆಗೆ ಜಮೆ ಮಾಡಿರುವುದು ಲೆಕ್ಕ ಪರಿಶೋಧನೆ ಸಂದರ್ಭ ಬಯಲಾಗಿದೆ.

2022ರ ಮೇ 1ರಿಂದ 2023ರ ನವಂಬರ್ 10 ರವರೆಗೆ ಒಟ್ಟು ₹ 16,41,211 ದುರುಪಯೋಗ ನಡೆದಿದೆ. ಇವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಬಾಲಕೃಷ್ಣ ಅವರ ದೂರಿನ ಮೇರೆಗೆ ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT