ಸೋಮವಾರ, 16 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಅಶೋಕ್‌, ವಿಜಯೇಂದ್ರ ದುರ್ಬಲರಾಗಿದ್ದರಿಂದ ರಾಜಭವನದ ದುರುಪಯೋಗ: ಹರಿಪ್ರಸಾದ್

Published : 1 ಸೆಪ್ಟೆಂಬರ್ 2024, 13:26 IST
Last Updated : 1 ಸೆಪ್ಟೆಂಬರ್ 2024, 13:26 IST
ಫಾಲೋ ಮಾಡಿ
Comments

ಮಡಿಕೇರಿ: ‘ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಮತ್ತು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ದುರ್ಬಲರಾಗಿರುವುದರಿಂದ ಬಿಜೆಪಿ ಹೈಕಮಾಂಡ್ ರಾಜಭವನವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ’ ಎಂದು ವಿಧಾನಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಆರೋಪಿಸಿದರು.

ಹೊರವಲಯದಲ್ಲಿ ಭಾನುವಾರ ಕೊಡವ ನ್ಯಾಷನಲ್ ಕೌನ್ಸಿಲ್ ಏರ್ಪಡಿಸಿದ್ದ ‘ಕೈಲ್ ಪೊಳ್ದ್’ ಆಚರಣೆಯಲ್ಲಿ ಪಾಲ್ಗೊಂಡಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ‘ಆಪರೇಷನ್ ಕಮಲ’ವೂ ಇವರಿಂದ ಸಾಧ್ಯವಾಗಲಿಲ್ಲ. ಇವರಿಬ್ಬರ ಅಸಮರ್ಥ ಕಾರ್ಯನಿರ್ವಹಣೆಯಿಂದ ರಾಜಭವನದ ದುರುಪಯೋಗ ನಡೆಯಿತು. ಇದರ ವಿರುದ್ಧ ನಾವು ಪ್ರತಿಭಟನೆ ನಡೆಸಿದೆವು’ ಎಂದರು.

‘ಬಿಜೆಪಿಯಲ್ಲಿ ಹಗರಣದ ಸರಮಾಲೆಯೇ ಇದೆ. ಸದ್ಯ, ಕೋವಿಡ್ ಹಗರಣದ ವರದಿ ಮುಖ್ಯಮಂತ್ರಿ ಕೈಸೇರಿದೆ. ಕೂಡಲೇ ಅದನ್ನು ಬಹಿರಂಗಪಡಿಸಬೇಕು ಹಾಗೂ ಯಾವ ಪಕ್ಷದವರೇ ಆಗಿದ್ದರೂ ತಪ್ಪಿತಸ್ಥರಿಗೆ ಶಿಕ್ಷೆ ಆಗುವಂತೆ ಮಾಡಬೇಕು’ ಎಂದು ಒತ್ತಾಯಿಸಿದರು.

‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ‘ಮುಡಾ’ ಹಗರಣದಲ್ಲಿ ಸಿಲುಕಿದ್ದಾರೆ ಎಂದು ಆರೋಪಿಸಲಾಗುತ್ತಿದೆ. ನ್ಯಾಯಾಲಯ ಏನು ತೀರ್ಪು ಕೊಡುತ್ತದೆ ಕಾದು ನೋಡೋಣ. ಆರೋಪ ಬಂದಾಕ್ಷಣ ರಾಜೀನಾಮೆ ನೀಡಬೇಕು ಎನ್ನುವುದಾದರೆ ಪ್ರಧಾನಿ ನರೇಂದ್ರ ಮೋದಿ ಮೊದಲು ರಾಜೀನಾಮೆ ಕೊಡಬೇಕಾಗುತ್ತದೆ’ ಎಂದು ಪ್ರತಿಕ್ರಿಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT