ಶುಕ್ರವಾರ, 19 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ವಸತಿ ಶಾಲೆಗೆ ಶಾಸಕ ಪೊನ್ನಣ್ಣ ಭೇಟಿ, ಪರಿಶೀಲನೆ

Published 9 ಜುಲೈ 2024, 6:09 IST
Last Updated 9 ಜುಲೈ 2024, 6:09 IST
ಅಕ್ಷರ ಗಾತ್ರ

ವಿರಾಜಪೇಟೆ: ಸಮೀಪದ ಆರ್ಜಿ ಗ್ರಾಮದ ಪೆರುಂಬಾಡಿಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಶಾಸಕ ಎ.ಎಸ್.ಪೊನ್ನಣ್ಣ ಈಚೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ವಸತಿ ನಿಲಯದ ಸ್ಟೋರ್ ರೂಂ, ಶೌಚಾಲಯ, ಅಡುಗೆ ಮನೆ ಪರಿಶೀಲಸಿ, ಬಿಸಿ ನೀರಿನ ವ್ಯವಸ್ಥೆ, ವಿದ್ಯುತ್ ದೀಪಗಳ ಕುರಿತು ಮಾಹಿತಿ ಪಡೆದುಕೊಂಡರು.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಶೌಚಾಲಯ ಸ್ವಚ್ಛತೆ, ಬಿಸಿ ನೀರಿನ ವ್ಯವಸ್ಥೆ, ವಿದ್ಯುತ್ ಸೇರಿದಂತೆ ಮತ್ತೆ ಕೆಲ ಸಮಸ್ಯೆಗಳನ್ನು ಶಾಸಕರ ಮುಂದಿಟ್ಟರು.

ಶಾಲೆಯ ವಿದ್ಯಾರ್ಥಿಗಳಿಗೆ ಪ್ರತಿ ನಿತ್ಯದ ಊಟ ಹೊರತುಪಡಿಸಿ ಬೇರೆ ಹಲವು ರೀತಿಯ ಸೌಕರ್ಯ ಒದಗಿಸುವ ನಿಟ್ಟಿನಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ತೋರಿರುವುದು ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಶಾಸಕರು, ಸಮಸ್ಯೆಗಳ ಬಗ್ಗೆ ಸಂಬಂಧಿಸಿದ ಅಧಿಕಾರಿಗಳಿಗೆ ಪತ್ರ ಬರೆದು ಯಾಕೆ ಪರಿಹರಿಸಲಿಲ್ಲ ಎಂದು ಶಾಲೆಯ ಪ್ರಾಂಶುಪಾಲರನ್ನು ಪ್ರಶ್ನಿಸಿದರು.

‘ಸರ್ಕಾರ ಸಾಕಷ್ಟು ಪ್ರಮಾಣದಲ್ಲಿ ಅನುದಾನ ನೀಡಿದರೂ ಅದನ್ನು ಸದ್ಬಳಕೆ ಮಾಡುವಲ್ಲಿ ಕೆಲ ಅಧಿಕಾರಿಗಳು ನಿರ್ಲಕ್ಷ್ಯ ತೋರುತ್ತಿದ್ದಾರೆ. ಇದು ಮಕ್ಕಳ ಕಲಿಕೆಯ ಮೇಲೆ ಪರಿಣಾಮ ಬೀರುತ್ತದೆ. ನಿರ್ಲಕ್ಷ್ಯ ತೋರುವ ಅಧಿಕಾರಿಗಳ ಹಾಗೂ ಸಿಬ್ಬಂದಿಗಳ ಮೇಲೆ ಕಠಿಣ ಕ್ರಮ ಜರುಗಿಸುವುದಾಗಿ’ ಎಚ್ಚರಿಸಿದರು.

ಕೆಪಿಸಿಸಿ ವಕ್ತಾರ ಎಂ.ಸಂಕೇತ್ ಪೂವಯ್ಯ, ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ರಂಜಿ ಪೂಣಚ್ಚ ಉಪಸ್ಥಿತರಿದ್ದರು.

ವಿರಾಜಪೇಟೆ ಸಮೀಪದ ಆರ್ಜಿಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಶಾಸಕ ಎ.ಎಸ್.ಪೊನ್ನಣ್ಣ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು
ವಿರಾಜಪೇಟೆ ಸಮೀಪದ ಆರ್ಜಿಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಶಾಸಕ ಎ.ಎಸ್.ಪೊನ್ನಣ್ಣ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT