ಮಂಗಳವಾರ, ಜೂನ್ 15, 2021
26 °C

‘ಕೊರೊನಾ ಮುಕ್ತ ಗ್ರಾ.ಪಂ’ಗೆ ₹5 ಲಕ್ಷ ಅನುದಾನ: ಎಂ.ಪಿ.ಅಪ್ಪಚ್ಚು ರಂಜನ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಡಿಕೇರಿ: ‘ಕೊಡಗು ಜಿಲ್ಲೆಯ ಗ್ರಾಮೀಣ ಪ್ರದೇಶಕ್ಕೂ ಕೊರೊನಾ ಸೋಂಕು ವ್ಯಾಪಿಸಿದ್ದು, ಮಡಿಕೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾ.ಪಂಗಳಲ್ಲಿ ‘ಕೊರೊನಾ ಮುಕ್ತ ಗ್ರಾಮ’ ಮಾಡುವ ಗ್ರಾ.ಪಂಗೆ ಶಾಸಕರ ನಿಧಿಯಿಂದ ₹ 5 ಲಕ್ಷ ಅನುದಾನ ನೀಡುತ್ತೇನೆ’ ಎಂದು ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಇಲ್ಲಿ ಶುಕ್ರವಾರ ಘೋಷಿಸಿದರು.

ನಗರದಲ್ಲಿ ಮಾತನಾಡಿದ ಅವರು, ‘ಜಿಲ್ಲೆಯಲ್ಲಿ ಕೆಲವು ದಿನಗಳಿಂದ ಸಾವಿನ ಸಂಖ್ಯೆ ಹಾಗೂ ಕೋವಿಡ್‌ ಪ್ರಕರಣಗಳು ಇಳಿಕೆಯಾಗುತ್ತಿರುವುದು ತುಸು ಸಮಾಧಾನ ತರಿಸಿದೆ. ರಾಜ್ಯದಲ್ಲಿ ಮೇ ಅಂತ್ಯದ ತನಕವೂ ಲಾಕ್‍ಡೌನ್‌ ಮುಂದುವರಿಸಬೇಕು ಜಿಲ್ಲೆಯಲ್ಲಿ ಇನ್ನಷ್ಟು ಬಿಗಿಯಾದ ನಿಯಮ ಜಾರಿಗೆ ತರಲಾಗುವುದು’ ಎಂದು ಹೇಳಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು