ಮಂಗಳವಾರ, 21 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಶಾಲನಗರದಲ್ಲಿ ಮಳೆ

Published 1 ಮೇ 2024, 15:26 IST
Last Updated 1 ಮೇ 2024, 15:26 IST
ಅಕ್ಷರ ಗಾತ್ರ

ಕುಶಾಲನಗರ (ಕೊಡಗು ಜಿಲ್ಲೆ): ಪಟ್ಟಣದಲ್ಲಿ ಬುಧವಾರ ಕೆಲ ಹೊತ್ತು ಸುರಿದ ಬಿರುಸಿನ ಮಳೆ ತಂಪೆರೆಯಿತು.

ಕೆಲವು ಯುವಕರು ರಸ್ತೆ ಬದಿಯಲ್ಲಿ ಕುಣಿದು ಸಂಭ್ರಮಿಸಿದರು. ಹಾಸನ ಜಿಲ್ಲೆ ರಾಮನಾಥಪುರ ಹೋಬಳಿಯ ಕಾಳೇನಹಳ್ಳಿ ಮತ್ತು ಸುತ್ತಮುತ್ತ ಅರ್ಧ ಗಂಟೆಗೂ ಹೆಚ್ಚು ಸಮಯ ತುಂತುರು ಮಳೆ ಬಿದ್ದಿತು.

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಬಂಡೀಪುರ ಮತ್ತು ಗೋಪಾಲಸ್ವಾಮಿ ಬೆಟ್ಟ, ಮದ್ದೂರು ವಲಯದ ವ್ಯಾಪ್ತಿಯಲ್ಲಿ ಅರ್ಧ ಗಂಟೆಗಳ ಕಾಲ ಗುಡುಗು–ಸಿಡುಲು ಸಹಿತ ಜೋರು ಮಳೆ ಸುರಿಯಿತು. ಬಿಸಿಲಿನ ಝಳಕ್ಕೆ ಕಂಗೆಟ್ಟಿದ ಜನ ಮಳೆ ಕಂಡು ಹರ್ಷಗೊಂಡರು.

ಕಾಡಂಚಿನ ಗ್ರಾಮಗಳಾದ ಹಂಗಳ, ಗೋಪಾಲಪುರ, ದೇವರಹಳ್ಳಿ, ಬೇರಾಂಬಾಡಿ, ಕಲ್ಲಿಗೌಡನಹಳ್ಳಿ ಮೊದಲಾದ ಗ್ರಾಮಗಳಲ್ಲೂ ಉತ್ತಮ ಮಳೆಯಾಗಿದೆ. ‌

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT