ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮಡಿಕೇರಿ | ಮುಂಗಾರು ವೇಳೆ; ಜಿಲ್ಲಾಧಿಕಾರಿಯೊಂದಿಗೆ ಚರ್ಚೆ ನಡೆಸಿದ ಎನ್‍ಡಿಆರ್‌ಎಫ್

Published 4 ಜೂನ್ 2024, 2:26 IST
Last Updated 4 ಜೂನ್ 2024, 2:26 IST
ಅಕ್ಷರ ಗಾತ್ರ

ಮಡಿಕೇರಿ: ಮುಂಗಾರು ವೇಳೆ ಸಂಭವಿಸಬಹುದಾದ ಪ್ರಾಕೃತಿಕ ವಿಕೋಪವನ್ನು ಎದುರಿಸುವಲ್ಲಿ ಅಗತ್ಯ ಮುನ್ನೆಚ್ಚರ ವಹಿಸುವ ಸಂಬಂಧ ಈಗಾಗಲೇ ಆಗಮಿಸಿರುವ ಅಜಯ್ ಕುಮಾರ್ ನೇತೃತ್ವದ ಎನ್‍ಡಿಆರ್‌ಎಫ್ ತಂಡವು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರನ್ನು ಸೋಮವಾರ ಭೇಟಿಯಾಯಿತು.

ಈ ವೇಳೆ ಮಳೆಗಾಲದಲ್ಲಿ ಅನುಸರಿಸಬೇಕಾದ ಕಾರ್ಯ ಚಟುವಟಿಕೆ ಬಗ್ಗೆ ಚರ್ಚೆ ನಡೆಸಲಾಯಿತು.

ಜಿಲ್ಲಾಧಿಕಾರಿ ವೆಂಕಟ್ ರಾಜಾ ಮಾತನಾಡಿ, ‘ಮಳೆ ಸಂಬಂಧ ಹವಾಮಾನ ಇಲಾಖೆಯಿಂದ ಕಾಲಕಾಲಕ್ಕೆ ಬಿಡುಗಡೆಯಾಗುವ ಮಾಹಿತಿಯನ್ನು ಅಪ್‍ಡೇಟ್ ಮಾಡಲಾಗುತ್ತದೆ. ಆ ನಿಟ್ಟಿನಲ್ಲಿ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಎಚ್ಚರವಹಿಸಿ, ರಕ್ಷಣಾ ಕಾರ್ಯಗಳನ್ನು ಕೈಗೊಳ್ಳಬೇಕು’ ಎಂದರು.

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣತ ಅನನ್ಯ ವಾಸುದೇವ, ಎನ್‍ಡಿಆರ್‌ಎಫ್ ತಂಡದ ಪ್ರಮುಖರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT