ಬೆಂಗಳೂರು: ‘ಕೊಡಗು ನಿರಾಶ್ರಿತರಿಗೆ ಟೆಂಟ್ ನಿರ್ಮಾಣ ಮಾಡಿಕೊಡುವ ಪ್ರಸ್ತಾವನೆ ಕೈ ಬಿಡಲಾಗಿದೆ. ಬದಲಿಗೆ ಸರ್ಕಾರದ ವತಿಯಿಂದ ಮನೆ ನಿರ್ಮಿಸಿಕೊಡುವವರೆಗೆ ಬಾಡಿಗೆ ರೂಪದಲ್ಲಿ ತಿಂಗಳಿಗೆ 10,000 ರೂಪಾಯಿ ಪರಿಹಾರ ಧನ ನೀಡಲಾಗುವುದು’ ಎಂದು ನಗರಾಭಿವೃದ್ಧಿ ಸಚಿವ ಯು.ಟಿ. ಖಾದರ್ ತಿಳಿಸಿದರು.

700-800 ನಿರಾಶ್ರಿತರನ್ನು ಗುರುತಿಸಲಾಗಿದೆ. ಅವರಿಗೆಲ್ಲ ಜಿಲ್ಲಾಧಿಕಾರಿ ಗುರುತಿಸಿದ ಸ್ಥಳಗಳಲ್ಲಿ ತಲಾ 6 ಲಕ್ಷ ರೂಪಾಯಿ ವೆಚ್ಚದಲ್ಲಿ ಮಾದರಿ ಮನೆಗಳನ್ನು ನಿರ್ಮಿಸಿಕೊಡಲಾಗುವುದು ಎಂದರು.

ರಾಜೀವ್ ಗಾಂಧಿ ವಸತಿ ನಿಗಮದಲ್ಲಿ ಮನೆ ಪಡೆದು ಸೂಕ್ತ ಸಮಯದಲ್ಲಿ ಹಣ ಪಾವತಿಸದ 72,370 ಫಲಾನುಭವಿಗಳ ಮಂಜೂರಾತಿಯನ್ನು ಬ್ಲಾಕ್ ಮಾಡಲಾಗಿತ್ತು. ಅವರಿಗೆಲ್ಲಾ ಅವರಿಗೆ ಹಣ ಪಾವತಿಗೆ ಮತ್ತೊಂದು ಅವಕಾಶ ನೀಡಿ ತಮ್ಮ ದಾಖಲಾತಿಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು. 32,000 ಜನರು ಇನ್ನೂ ತಮ್ಮ ದಾಖಲೆಗಳನ್ನು ಸಲ್ಲಿಸಿಲ್ಲ. ಇದುವರಗೆ ದಾಖಲೆ ಸಲ್ಲಿಸದವರಿಗೆ ಅಕ್ಟೋಬರ್ 15ರ ವರಗೆ ಮತ್ತೊಂದು ಅವಕಾಶ ಕಲ್ಪಿಸಲಾಗಿದೆ ಎಂದರು.

ಫಲಾನುಭವಿಗಳು ಗ್ರಾಮಪಂಚಾಯ್ತಿ ಪಿಡಿಓಗಳ ಮೂಲಕವೇ ದಾಖಲೆಗಳನ್ನು ಅಪ್ ಲೋಡ್ ಮಾಡಿಸಬೇಕು ಎಂದೂ ಸಚಿವರು ತಿಳಿಸಿದರು.

ಮೈತ್ರಿ ಸರ್ಕಾರ ಸುಭದ್ರವಾಗಿದೆ. ಬಿಜೆಪಿಯವರ ಎಲ್ಲ ಪ್ರಯತ್ನ ವಿಫಲವಾಗಿವೆ. ಮಮ್ಮ ಯಾವುದೇ ಶಾಸಕರು ಪಕ್ಷ ಬಿಟ್ಟು ಹೋಗಲ್ಲ. ಅದು ವಿಧಾನ ಪರಿಷತ್ ಚುನಾವಣೆಯಿಂದ ಸಾಬೀತಾಗಿದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.