ಶನಿವಾರ, ಡಿಸೆಂಬರ್ 14, 2019
26 °C

ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದನ್ನು ಕಂಡ ಮಗನೂ ಸಾವು: ಕಾರಣ ಮಗನ ದಾಂಪತ್ಯ!

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸೋಮವಾರಪೇಟೆ: ಸಮೀಪದ ಆಲೇಕಟ್ಟೆಯ ನಿವಾಸಿ ತಂಗಮಣಿ ಮತ್ತು ಅವರ ಪುತ್ರ ಹರೀಶ್ ಭಾನುವಾರ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕೂಲಿ ಕೆಲಸ ಮಾಡುತ್ತಿದ್ದ ತಂಗಮಣಿ, ತಮ್ಮ ಮನೆಯಲ್ಲಿ ನೇಣು ಹಾಕಿಕೊಂಡಿದ್ದಾರೆ. ಆಟೊ ಚಾಲಕರಾಗಿದ್ದ ಹರೀಶ್ ಮಧ್ಯಾಹ್ನ ಊಟಕ್ಕೆಂದು ಮನೆಗೆ ಬಂದಾಗ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವುದನ್ನು ನೋಡಿ, ತಾನೂ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಹರೀಶ್ ದಾಂಪತ್ಯ ಜೀವನದಲ್ಲಿ ಉಂಟಾಗಿದ್ದ ವೈಮನಸ್ಸಿನಿಂದಾಗಿ ತಾಯಿ ಮತ್ತು ಮಗ ಬೇಸತ್ತಿದ್ದರು ಎನ್ನಲಾಗಿದೆ.

ಸ್ಥಳಕ್ಕೆ ಸೋಮವಾರಪೇಟೆ ಸಿಪಿಐ ನಂಜುಂಡೇಗೌಡ, ಠಾಣಾಧಿಕಾರಿ ಶಿವಶಂಕರ್ ಭೇಟಿ ನೀಡಿ ಪರಿಶೀಲಿಸಿದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು