ಮಡಿಕೇರಿ: ದಕ್ಷಿಣ ಕೊಡಗಿನ ವಿರಾಜಪೇಟೆ ಹಾಗೂ ಪೊನ್ನಂಪೇಟೆ ತಾಲ್ಲೂಕಿನ ಹಲವೆಡೆ ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಶುಕ್ರವಾರ ಭೇಟಿ ನೀಡಿದರು.

ಪೊನ್ನಂಪೇಟೆಯಲ್ಲಿ ನೂತನವಾಗಿ ನಿರ್ಮಾಣವಾಗಿರುವ ಅಂಚೆ ಕಚೇರಿಗೆ ಭೇಟಿ ನೀಡಿ ನೂತನ ಕಟ್ಟಡವನ್ನು ವೀಕ್ಷಿಸಿದರು.

ಟಿ.ಶೆಟ್ಟಿಗೇರಿಯಲ್ಲಿನ ಬಿಜೆಪಿ ಶಕ್ತಿ ಕೇಂದ್ರಕ್ಕೆ ಬಂದ ಅವರನ್ನು ಸ್ಥಳೀಯ ಮುಖಂಡರು ಸ್ವಾಗತಿಸಿದರು.

ಕೋಟ್ರಮಾಡ ಮಂಜು ಹಾಗೂ ಮುಕ್ಕಾಟಿರ ಕನ್ನು ಕರುಂಬಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿರಾಜಪೇಟೆ ಮಂಡಲ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿ, ಜಿಲ್ಲಾ ಹಾಗೂ ತಾಲೂಕು ಮಟ್ಟದ ಪದಾಧಿಕಾರಿಗಳು, ಶಕ್ತಿ ಕೇಂದ್ರ ಸಹ ಪ್ರಮುಖರು, ಬೂತ್ ಅಧ್ಯಕ್ಷರು, ವಿವಿಧ ಮೋರ್ಚಾಗಳ ಪದಾಧಿಕಾರಿಗಳು, ಬಿಜೆಪಿ ಬೆಂಬಲಿತ ಚುನಾಯಿತ ಪ್ರತಿನಿಧಿಗಳು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

ಈ ವೇಳೆ ಇವರೊಂದಿಗೆ ಜಿಲ್ಲಾಧ್ಯಕ್ಷ ರವಿ ಕಾಳಪ್ಪ ಹಾಗೂ ಜಿಲ್ಲಾ ಘಟಕದ ಪದಾಧಿಕಾರಿಗಳು ಭಾಗವಹಿಸಿದ್ದರು.

ಕಾನೂರು ಗ್ರಾಮದ ಬಿಜೆಪಿ ಶಕ್ತಿ ಕೇಂದ್ರಕ್ಕೆ ಅವರೊಂದಿಗೆ ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ ಹಾಗೂ ಪಕ್ಷದ ಹಿರಿಯ ಮುಖಂಡ ಕೆ.ಜಿ. ಬೋಪಯ್ಯ ಇದ್ದರು.

ಕಾನೂರು ಶಕ್ತಿ ಕೇಂದ್ರ ಮುಖಂಡ ಅಣ್ಣಳಮಾಡ ನವೀನ್ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಹಲವು ಮುಖಂಡರು ಭಾಗವಹಿಸಿದ್ದರು.

ಇದಕ್ಕೂ ಮುನ್ನ ಅವರು ಬಿರುನಾಣಿ ಗ್ರಾಮದ ಬಿಜೆಪಿ ಶಕ್ತಿ ಕೇಂದ್ರದಲ್ಲಿ ಸಭೆ ನಡೆಸಿ ಸಾರ್ವಜನಿಕರ ಆಹವಾಲು ಸ್ವೀಕರಿಸಿ ಕೊಡಗಿಗೆ ತಾವು ತಂದ ಹಲವಷ್ಟು ಅನುದಾನ ಮತ್ತು ಅಭಿವೃದ್ಧಿ ಬಗ್ಗೆ ಮಾಹಿತಿ ನೀಡಿದರು.

ವೇದಿಕೆಯಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ರವಿ ಕಾಳಪ್ಪ, ಶಕ್ತಿ ಕೇಂದ್ರ ಅಧ್ಯಕ್ಷ ರಾಯ್, ಮಂಡಲ ಅಧ್ಯಕ್ಷ ಸುವಿನ್ ಗಣಪತಿ, ಜಿಲ್ಲಾ ಪ್ರದಾನ ಕಾರ್ಯದರ್ಶಿಗಳಾದ ಮಹೇಶ್ ಜೈನಿ, ಚಲನ್ ಕುಮಾರ್, ರೀನಾ ಪ್ರಕಾಶ್, ರಾಬಿನ್ ದೇವಯ್ಯ, ಕಿಲನ್ ಗಣಪತಿ, ಅರುಣ್ ಬೀಮಯ್ಯ, ಮಹೇಶ್ ತಿಮ್ಮಯ್ಯ, ಆಪ್ರು ರವೀಂದ್ರ, ಮೊಗೇರ ರವಿ, ಯಮುನಾ ಚಂಗಪ್ಪ, ಉಮೇಶ್ ಸುಬ್ರಮಣಿ, ಮುಧ್ಯಡ ಮಂಜು ಅಜೀತ್ ಕರುoಬಯ್ಯ, ಆರ್.ಕೆ.ಚಂದ್ರು ಭಾಗವಹಿಸಿದ್ದರು.

ಪೊನ್ನಂಪೇಟೆ ತಾಲ್ಲೂಕಿನ ಬಲ್ಯಮುಂಡೂರು ಹಾಗೂ ಕಿರುಗೂರು ಬಿಜೆಪಿ ಶಕ್ತಿ ಕೇಂದ್ರಕ್ಕೂ ಅವರು ಭೇಟಿ ನೀಡಿದ್ದರು.

ಪೊನ್ನಂಪೇಟೆಯಲ್ಲಿ ಶಕ್ತಿ ಕೇಂದ್ರ ಮುಖಂಡರಾದ ಅಡ್ಡಂಡ ನಿಲನ್ ಹಾಗೂ ಚೀರಂಡ ಕಂದಾ ದೇವಯ್ಯ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.