ಭಾನುವಾರ, ಮೇ 29, 2022
21 °C

ತಂದೆಯಿಂದಲೇ ಮಗನ ಕೊಲೆ: ಆರೋಪಿ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶನಿವಾರಸಂತೆ: ‘ತೆಂಗಿನ ಮರದಿಂದ ಆಕಸ್ಮಿಕವಾಗಿ ಜಾರಿ ಬಿದ್ದು ಪುತ್ರ ಮೃತಪಟ್ಟಿದ್ದಾನೆ’ ಎಂದು ದೂರು ನೀಡಿದ್ದ ತಂದೆಯನ್ನೇ ಕೊಲೆ ಆರೋಪದ ಮೇಲೆ ಪೊಲೀಸರು ಬಂಧಿಸಿದ್ದಾರೆ.

ಇಲ್ಲಿನ ಬೈಪಾಸ್ ರಸ್ತೆಯ ಮಹೇಂದ್ರ ಕುಮಾರ್ ಬಂಧಿತ ಆರೋಪಿ.

ಮಡಿಕೇರಿ ಕೆಎಸ್‌ಆರ್‌ಟಿಸಿಯಲ್ಲಿ ನಿರ್ವಾಹಕರಾಗಿರುವ ಆರೋಪಿ, ಇದೇ 1ರಂದು ಪುತ್ರ ಏಕಾಂತಾಚಾರಿ (20) ತೋಟದಲ್ಲಿ ಮರದಿಂದ ಬಿದ್ದು ಮೃತಪಟ್ಟಿದ್ದಾನೆ ಎಂದು ದೂರು ನೀಡಿದ್ದರು. ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಶವ ಪರೀಕ್ಷೆ ಸಂದರ್ಭದಲ್ಲಿ ಹಲ್ಲೆ ನಡೆಸಿದಾಗ ಗುರುತು ಗೋಚರಿಸಿತ್ತು. ಈ ಬಗ್ಗೆ ತನಿಖೆ ನಡೆಸಿದಾಗ ಆರೋಪಿ ಮಹೇಂದ್ರ ಕುಮಾರ್‌, ಪುತ್ರನನ್ನು ತೋಟಕ್ಕೆ ಕರೆದೊಯ್ದು ಕೊಲೆ ಮಾಡಿದ್ದಾನೆ ಎಂಬುದು ಗೊತ್ತಾಗಿದೆ. ಹೆಚ್ಚಿನ ವಿಚಾರಣೆಗಾಗಿ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾರಣ ತಿಳಿದುಬಂದಿಲ್ಲ.

ಸಿಪಿಐ ಬಿ.ಜಿ.ಮಹೇಶ್, ಪಿಎಸ್ಐ ಎಚ್.ಈ.ದೇವರಾಜ್, ಸಿಬ್ಬಂದಿ ಲೋಕೇಶ್, ಅನಂತಕುಮಾರ್, ಪ್ರದೀಪ್ ಕುಮಾರ್, ಮುರಳಿ, ಹರೀಶ್, ದಯಾನಂದ್, ಗಿರೀಶ್, ರಾಜೇಶ್ ಪ್ರಕರಣದ ತನಿಖೆಯನ್ನು ಕೈಗೊಂಡಿದ್ದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು