ವಿರಾಜಪೇಟೆ: ಸಮೀಪದ ಚೆಂಬೆಬೆಳ್ಳೂರು ಗ್ರಾಮದಲ್ಲಿ ಕಾರ್ಮಿಕನನ್ನು ಗುಂಡಿಕ್ಕಿ ಕೊಲೆ ಮಾಡಿದ ಪ್ರಕರಣದ ಆರೋಪಿಗೆ ಅತ್ಯಂತ ಕಠಿಣ ಶಿಕ್ಷೆ ನೀಡಬೇಕು ಎಂದು ಸಿಪಿಐ(ಎಂ) ಪಕ್ಷದ ಜಿಲ್ಲಾ ಸಮಿತಿಯ ಕಾರ್ಯದರ್ಶಿ ಎಚ್.ಬಿ. ರಮೇಶ್ ಅವರು ಒತ್ತಾಯಿಸಿದ್ದಾರೆ.

ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತೋಟದ ಕೂಲಿ ಕಾರ್ಮಿಕ ಪಣಿ ಎರವರ ಪೊನ್ನು ಎಂಬಾತನ ಮೇಲೆ ಗುಂಡು ಹಾರಿಸಿ ಕೊಲೆ ಮಾಡಿರುವುದು ಅಮಾನುಷ ಕೃತ್ಯವಾಗಿದೆ. ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸುವ ಸಂದರ್ಭ ಡಿವೈಎಸ್ಪಿ ಅವರು ಯಾವುದೇ ಒತ್ತಡಕ್ಕೆ ಮಣಿಯಬಾರದು. ಸಂತ್ರಸ್ತ ಕುಟುಂಬಕ್ಕೆ ಜಿಲ್ಲಾಡಳಿತವು ಉದ್ಯೋಗ ಸೇರಿದಂತೆ ಎಲ್ಲಾ ಸೌಲಭ್ಯ ಕಲ್ಪಿಸಬೇಕು. ಈ ಹೇಯ ಕೃತ್ಯವನ್ನು ಖಂಡಿಸಿ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಜ.6ರಂದು ಪ್ರತಿಭಟನೆ ನಡೆಸಿ, ಕುಟುಂಬಕ್ಕೆ ನ್ಯಾಯ ಒದಗಿಸಲು ಮನವಿ ಸಲ್ಲಿಸಲಾಗುತ್ತದೆ ಎಂದರು.

ಪಕ್ಷದ ಜಿಲ್ಲಾ ಸಮಿತಿಯ ಸದಸ್ಯ ಪಿ.ಆರ್. ಭರತ್ ಮಾತನಾಡಿ, ಹಲಸಿನ ಮಿಡಿಗಾಗಿ ಕಾರ್ಮಿಕನನ್ನು ಕೊಲೆ ಮಾಡಿರುವುದು ಪೈಶಾಚಿಕ ಕೃತ್ಯವಾಗಿದೆ. ಅದಿವಾಸಿಗಳನ್ನು ಮೇಲ್ಜಾತಿಯ ಕೆಲವರು ತುಚ್ಛವಾಗಿ ಕಾಣುವುದು ಇಂದಿಗೂ ಮುಂದುವರಿದಿದೆ. ಅದಿವಾಸಿಗಳ ಮೇಲೆ ಅನುಕಂಪ ತೋರುವ ಶಾಸಕರು ಇಂದಿನವರೆಗೂ ಸಂತ್ರಸ್ತರ ಮನೆಗೆ ಭೇಟಿ ನೀಡದಿರುವುದು ಸರಿಯಲ್ಲ. ಕೋವಿಯ ಪರವಾನಿಗೆ ನೀಡಿರುವುದು ಆತ್ಮ ರಕ್ಷಣೆಗಾಗಿ ಹೊರತು, ಮತ್ತೊಬ್ಬ ವ್ಯಕ್ತಿಯನ್ನು ಕೊಲೆ ಮಾಡುವುದಕ್ಕಲ್ಲ ಎನ್ನುವುದು ತಿಳಿಯಬೇಕಿದೆ. ಸಂತ್ರಸ್ತ ಕುಟುಂಬಕ್ಕೆ ನ್ಯಾಯ ದೊರಕುವವರೆಗೂ ಪಕ್ಷದ ವತಿಯಿಂದ ಹೋರಾಟ ಮಾಡಲಾಗುತ್ತದೆ ಎಂದರು.

ಜಿಲ್ಲಾ ಸಮಿತಿಯ ಸದಸ್ಯ ಎನ್.ಡಿ. ಕುಟ್ಟಪ್ಪ ಮಾತನಾಡಿದರು. ಗೋಷ್ಠಿಯಲ್ಲಿ ಜಿಲ್ಲಾ ಸಮಿತಿಯ ಸದಸ್ಯರಾದ ಎ.ಸಿ. ಸಾಬು, ಪದ್ಮಿನಿ ಶ್ರೀಧರ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.