ಭಾನುವಾರ, 14 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿರಾಜಪೇಟೆ | ಪತಿಯಿಂದ ಪತ್ನಿಯ ಕೊಲೆ; ಆರೋಪಿ ಬಂಧನ

ಒಂದೇ ದಿನ ಇಬ್ಬರು ಆತ್ಮಹತ್ಯೆ, ವಿರಾಜಪೇಟೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲು
Published 28 ಫೆಬ್ರುವರಿ 2024, 5:10 IST
Last Updated 28 ಫೆಬ್ರುವರಿ 2024, 5:10 IST
ಅಕ್ಷರ ಗಾತ್ರ

ವಿರಾಜಪೇಟೆ: ಪತ್ನಿಯನ್ನು ಕೊಲೆ ಮಾಡಿದ ಆರೋಪದ ಮೇರೆಗೆ ಇಲ್ಲಿನ ಕದನೂರು ಗ್ರಾಮದ ಟಿ.ಸುರೇಶ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

‘ಇಲ್ಲಿನ ಲೈನ್‌ಮನೆಯೊಂದರಲ್ಲಿ ವಾಸವಿದ್ದ ದಂಪತಿ ಮಧ್ಯೆ ಸೋಮವಾರ ರಾತ್ರಿ ಜಗಳ ಆರಂಭವಾಗಿದೆ. ಕೋಪದಿಂದ ಪತಿ ಸುರೇಶ್ ತನ್ನ ಪತ್ನಿ ಉಷಾ (28) ಎಂಬುವವರ ಮೇಲೆ ದೊಣ್ಣೆಯಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದಾನೆ. ಸುರೇಶ್‌ನನ್ನು ಬಂಧಿಸಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣ ವಿರಾಜಪೇಟೆ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿದೆ.

ಇಬ್ಬರು ಆತ್ಮಹತ್ಯೆ

ವಿರಾಜಪೇಟೆ: ಇಲ್ಲಿನ ತೆರಮೆಮೊಟ್ಟೆ ಗ್ರಾಮದ ನಿವಾಸಿ ರಂಜನ್ (30) ಎಂಬುವವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇವರು ಫೆ 24 ರಂದು ವಿಷ ಸೇವಿಸಿದ್ದರು. ಕೂಡಲೇ ಮಡಿಕೇರಿಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಇವರು ಮೃತಪಟ್ಟರು ಎಂದು ಪೊಲೀಸರು ಹೇಳಿದ್ದಾರೆ.

ವಿಷ ಸೇವಿಸಿದ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಮೀಪದ ಎಂಬುವವರು ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಮೃತಪಟ್ಟಿದ್ದಾರೆ.

ಹೆಗ್ಗಳ ಗ್ರಾಮದ ನಿವಾಸಿ ಆತ್ಮಹತ್ಯೆ

ಇಲ್ಲಿಗೆ ಸಮೀಪದ ಹೆಗ್ಗಳ ಗ್ರಾಮದ ನಿವಾಸಿ ರಾಜು (40) ಎಂಬುವವರು ಮಂಗಳವಾರ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ವಿಷ ಸೇವಿಸಿದ ಕೂಡಲೇ ಇವರನ್ನು ಮಡಿಕೇರಿಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಮಂಗಳವಾರ ಮೃತಪಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ.

ಎರಡೂ ಪ್ರಕರಣಗಳು ವಿರಾಜಪೇಟೆ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT