ಗುರುವಾರ , ಅಕ್ಟೋಬರ್ 1, 2020
24 °C

ಬಿಜೆಪಿ ಮುಖಂಡ ಎಂ.ಡಬ್ಯು. ಅಯ್ಯಪ್ಪ ನಿಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಗೋಣಿಕೊಪ್ಪಲು: ಇಲ್ಲಿನ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸ್ಥಾಪಕ ಅಧ್ಯಕ್ಷ ಹಾಗೂ ಬಿಜೆಪಿ ಮುಖಂಡ ಎಂ.ಡಬ್ಯು.ಅಯ್ಯಪ್ಪ (99) ಮಂಗಳವಾರ ದೇವರಪುರ ಕಾಫಿ ತೋಟದ ಮನೆಯಲ್ಲಿ ನಿಧನರಾದರು

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅಯ್ಯಪ್ಪ ಅ‌ವರು ಒಂದು ವರ್ಷದಿಂದ ಮನೆಯಲ್ಲಿಯೇ ಕಾಲ ಕಳೆಯುತ್ತಿದ್ದರು. ಬಿಜೆಪಿ ನಿಷ್ಠಾವಂತ ಕಾರ್ಯಕರ್ತರಾಗಿದ್ದ ಇವರು ಉತ್ತಮ ಸಮಾಜ ಸೇವಕರೂ ಆಗಿದ್ದರು. ನೂರಾರು ಎಕರೆ ಕಾಫಿ ತೋಟ ಹೊಂದಿದ್ದ ಇವರು ಧನಸಹಾಯ ಬೇಡಿ ಮನೆಗೆ ಬಂದವರೆಗೆಲ್ಲ ಕೈಲಾದಷ್ಟು ಸಹಾಯ ಮಾಡುವ ಮೂಲಕ ಕೊಡುಗೈ ದಾನಿ ಎನಿಸಿಕೊಂಡಿದ್ದರು.

ತಮ್ಮ 16 ನೇ ವಯಸ್ಸಿನಲ್ಲಿ ಸಮಾಜ ಸೇವೆಗೆ ಧುಮುಕಿದ ಇವರು ಜಿಲ್ಲೆಯ ಉದ್ದಗಲಕ್ಕೂ ಓಡಾಡಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಹಾಗೂ ಜನಸಂಘವನ್ನು ಕಟ್ಟಿದ್ದರು.

ಅವರಿಗೆ ಪತ್ನಿ, ಪುತ್ರ ಹಾಗೂ ಪುತ್ರಿ ಇದ್ದಾರೆ. ಅಂತಿಕ್ರಿಯೆ ಕಾಫಿ ತೋಟದಲ್ಲಿ ಮಂಗಳವಾರ ಸಂಜೆ ನಡೆಯಿತು.

ಶಾಸಕ ಕೆ.ಜಿ.ಬೋಪಯ್ಯ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು