ಮಡಿಕೇರಿ: ಇಲ್ಲಿನ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಶನಿವಾರವಷ್ಟೇ ಸಂಗ್ರಹಿಸಲಾಗಿದ್ದ ಡಾಲು ಅವರ ಎರಡು ಮೂತ್ರಪಿಂಡಗಳನ್ನು ಭಾನುವಾರ ಮೈಸೂರಿನ ಜೆಎಸ್ಎಸ್ ಆಸ್ಪತ್ರೆಯಲ್ಲಿ ಯಶಸ್ವಿಯಾಗಿ ಕಸಿ ಮಾಡಲಾಗಿದೆ.ಈ ಮೂಲಕ ಸಂಸ್ಥೆಯಲ್ಲಿ ನಡೆದ ಮೊದಲ ಅಂಗಾಂಗ ದಾನ ಕಾರ್ಯಾಚರಣೆ ಜೀವ ಉಳಿಸುವ ಮಹತ್ವದ ಸಾಧನೆಯಾಗಿ ಪರಿಣಮಿಸಿದೆ ಎಂದು ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಡೀನ್ ಮತ್ತು ನಿರ್ದೇಶಕ ಡಾ.ಎ.ಜೆ.ಲೋಕೇಶ್ ತಿಳಿಸಿದ್ದಾರೆ.

ಅಂಗಾಂಗ ದಾನದ ಮೂಲಕ ಇಬ್ಬರು ರೋಗಿಗಳಿಗೆ ಹೊಸ ಬದುಕಿನ ಆಶಾಕಿರಣ ದೊರೆತಿದೆ. ಮೂತ್ರಪಿಂಡ ಕಸಿಗೆ ಅಗತ್ಯ ಸಹಕಾರ ನೀಡಿದ ಜೆ.ಎಸ್.ಎಸ್ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆಯ ತಜ್ಞ ವೈದ್ಯರಾದ ಡಾ.ಮಂಜುನಾಥ ಶೆಟ್ಟಿ, ಡಾ.ಆರ್.ವಿಜಯಕುಮಾರ್, ಡಾ.ಸಚಿನ್ ಧಾರವಾಡ್ಕರ್, ರಾಜೇಂದ್ರ, ಗವಿ ಪ್ರಸಾದ್ ಅವರಿಗೆ ಧನ್ಯವಾದ ಸಮರ್ಪಿಸಿದ್ದಾರೆ.

ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ ಎಲ್ಲಾ ವೈದ್ಯರು, ನರ್ಸಿಂಗ್ ಸಿಬ್ಬಂದಿ, ಆಡಳಿತ ಮಂಡಳಿ ಹಾಗೂ ಸಹಕರಿಸಿದ ಎಲ್ಲಾ ಇಲಾಖೆಗಳ ಒಗ್ಗಟ್ಟಿನ ಪ್ರಯತ್ನದ ಫಲಕಾರಿಯಾಗಿದೆ. ನಮ್ಮ ಸಮೂಹ ಪ್ರಯತ್ನಗಳು ಜೀವ ಉಳಿಸುವ ಕಾರ್ಯವಾಗಿ ರೂಪಾಂತರಗೊಂಡಿರುವುದು ಸಂತಸದ ಸಂಗತಿ. ಈ ಕಾರ್ಯದಲ್ಲಿ ಭಾಗವಹಿಸಿದ ಪ್ರತಿಯೊಬ್ಬರಿಗೂ ಹೃತ್ಪೂರ್ವಕ ಧನ್ಯವಾದಗಳು ಎಂದು ಅವರು ತಿಳಿಸಿದ್ದಾರೆ.

ಅಂಗಾಂಗ ದಾನಕ್ಕೆ ಒಪ್ಪಿಗೆ ನೀಡಿದ ದಾನಿ ಡಾಲು ಅವರ ಕುಟುಂಬದ ಮಾನವೀಯ ನಿರ್ಧಾರಕ್ಕೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಪ್ರಶಂಸೆ ವ್ಯಕ್ತವಾಗುತ್ತಿದ್ದು, ಅವರಿಗೆ ಕೃತಜ್ಞತೆ ಸಮರ್ಪಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260525-51-78042039

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.