ನಾಪೋಕ್ಲು: ಅವಂದೂರು ಗ್ರಾಮದ ಪುರಾತನ ಗೋಪಾಲಕೃಷ್ಣ ದೇವರ ಬಿಂಬ ಪುನರ್ಪ್ರತಿಷ್ಠೆ ಹಾಗೂ ಅಷ್ಟಬಂಧ ಬ್ರಹ್ಮಕಲಶೋತ್ಸವವು ನೀಲೇಶ್ವರ ಉಚಿಲತ್ತಾಯ ಪದ್ಮನಾಭ ತಂತ್ರಿ ನೇತೃತ್ವದಲ್ಲಿ ಶ್ರದ್ಧಾ ಭಕ್ತಿಯಿಂದ ಸಂಪನ್ನಗೊಂಡಿತು.

ಬ್ರಹ್ಮಕಲಶೋತ್ಸವದ ಅಂಗವಾಗಿ ಪ್ರಾರ್ಥನೆ, ಪ್ರಸಾದ ಪರಿಗ್ರಹ, ಬಿಂಬ ಪರಿಗ್ರಹ, ಪ್ರಸಾದ ಶುದ್ಧಿ, ವಾಸ್ತು ಬಲಿ ಆದಿಯಾಗಿ ವಿವಿಧ ಧಾರ್ಮಿಕ ವಿಧಿವಿಧಾನಗಳು ಜರುಗಿದವು.

ವಿವಿಧ ಭಜನಾ ಮಂಡಳಿಗಳಿಂದ ಭಜನಾ ಸಂಕೀರ್ತನಾ ಸೇವೆ ನಡೆಯಿತು. ಪುಟಾಣಿ ಬಾಲಕ ಬಾಲಕಿಯರು ಕೃಷ್ಣ, ರಾಧೆ, ರುಕ್ಮಿಣಿ ವೇಷಭೂಷಣ ಧರಿಸಿ ಕಾರ್ಯಕ್ರಮಕ್ಕೆ ಮೆರಗು ನೀಡಿದರು. ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಹಾಸನದ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶಂಭುನಾಥ ಸ್ವಾಮೀಜಿ ಮತ್ತು ಶ್ರೀಧಾಮ ಮಾಣಿಲದ ದುರ್ಗಾಮಹಾಲಕ್ಷ್ಮೀ ದೇವಸ್ಥಾನದ ಮೋಹನದಾಸ ಪರಮಹಂಸ ಸ್ವಾಮೀಜಿ ಆಶೀರ್ವಚನ ನೀಡಿದರು.

ವಿಧಾನಸಭಾ ಮಾಜಿ ಸ್ಪೀಕರ್ ಕೆ.ಜಿ ಬೋಪಯ್ಯ, ನಿವೃತ್ತ ಬ್ಯಾಂಕ್ ಅಧಿಕಾರಿ ಪೊನ್ನಚ್ಚನ ತಮ್ಮಯ್ಯ, ಡಿ.ಸಿ.ಸಿ ಬ್ಯಾಂಕ್ ನಿವೃತ್ತ ವ್ಯವಸ್ಥಾಪಕ ಪಟ್ಟಡ ದೇವಯ್ಯ, ಗೋಪಾಲಕೃಷ್ಣ ದೇವಸ್ಥಾನದ ಪ್ರಧಾನ ಅರ್ಚಕ ದಿನೇಶ್ ಭಟ್, ಮಾಜಿದೇವ ತಕ್ಕರಾದ ಬೆಳ್ಯನ ನಾಣಯ್ಯ, ದೇವ ತಕ್ಕರಾದ ಬೆಳ್ಯನ ವಾಸುದೇವ, ಜೀರ್ಣೋದ್ಧಾರ ಸಮಿತಿ ಉಪಾಧ್ಯಕ್ಷ ಚೊಕ್ಕಾಡಿ ಅಪ್ಪಯ್ಯ, ಕಾರ್ಯದರ್ಶಿ ಪಟ್ಟಡ ಸುಗುಣ ಕುಮಾರ್, ಖಜಾಂಚಿ ಬೆಳ್ಯನ ಚಂದ್ರಪ್ರಕಾ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260525-51-980793375

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.