ನಾಪೋಕ್ಲು: ಕೊಡಗಿನ ಪ್ರಪ್ರಥಮ ಪೊನ್ನು ಮುತ್ತಪ್ಪ ದೇವಸ್ಥಾನ ಹಾಗೂ ಎರಡನೇ ಪರಶಿನಿ ಎಂದು ಪ್ರಖ್ಯಾತವಾಗಿರುವ ಇಲ್ಲಿನ ಪೊನ್ನು ಮುತ್ತಪ್ಪ ದೇವರ ವಾರ್ಷಿಕ ಉತ್ಸವ ಭಾನುವಾರ ಸಾಂಪ್ರದಾಯಿಕವಾಗಿ ವಿಜೃಂಭಣೆಯಿಂದ ಸಂಪನ್ನಗೊಂಡಿತು.

ಶನಿವಾರ ಮಧ್ಯಾಹ್ನ ಪೈಂಗುತ್ತಿ ಹಾಗೂ ಸಂಜೆ ಮುತ್ತಪ್ಪ ದೇವರ ಕಳಸ ನಡೆಯಿತು. ಪವಿತ್ರ ಕಾವೇರಿ ನದಿಯಲ್ಲಿ ಸ್ನಾನದ ನಂತರ ಪ್ರಖ್ಯಾತ ಕೇರಳ ಚಂಡೆಗಳೊಂದಿಗೆ ನಾಪೋಕ್ಲು ಪೇಟೆಯ ಮುಖ್ಯ ಬೀದಿಯಲ್ಲಿ ಸನ್ನಿಧಾನಕ್ಕೆ ಮೆರವಣಿಗೆ ಮೂಲಕ ಆಗಮನವಾಯಿತು.

ಈ ಸಂದರ್ಭ ಸಿಡಿಮದ್ದು ಪ್ರದರ್ಶನ, ಕೇರಳದ ನೃತ್ಯ, ವಿದ್ಯುತ್ ದೀಪಗಳಿಂದ ಅಲಂಕರಿಸಿದ ಮಂಟಪ ಮತ್ತಿತರ ಮನರಂಜನಾ ಕಾರ್ಯಕ್ರಮಗಳು ನಡೆದು ಜನಮನ ಆಕರ್ಷಿಸಿದವು. ರಾತ್ರಿ ವೆಳ್ಳಾಟಂ ಬಳಿಕ ಕುಟ್ಟಿಚಾತ ಮತ್ತು ಗುಳಿಗ ದೇವರ ವೆಳ್ಳಾಟಂ ನಡೆದವು.

ಉತ್ಸವದ ಅಂಗವಾಗಿ ಶುಕ್ರವಾರ ಗಣಪತಿ ಹೋಮ ಮತ್ತು ಶುದ್ಧ ಕಳಸ ಪೂಜೆಯನ್ನು ಕೇರಳ ನೀಲೇಶ್ವರದ ಮುರಳಿ ಕೃಷ್ಣ ತಂತ್ರಿ ಅವರಿಂದ ನಡೆಸಲಾಯಿತು. ರಾತ್ರಿ ಗುರು ಪೂಜೆ ಹಾಗೂ ಶ್ರೀದೇವಿ ಪೂಜೆ ನಡೆಯಿತು.

ಭಾನುವಾರ ಪ್ರಾಂತಕಾಲ ಗುಳಿಗ ಕೋಲ, ಬಳಿಕ ಕುಟ್ಟಿಚಾತ ಕೋಲ ಹಾಗೂ ತಿರುವಪ್ಪನ್ ಮತ್ತು ಮುತ್ತಪ್ಪ ತೆರೆ ಜರುಗಿದವು.

ಉತ್ಸವದ ಅಂಗವಾಗಿ ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ಏರ್ಪಡಿಸಲಾಗಿತ್ತು. ಭಕ್ತರು ತಮ್ಮ ಇಷ್ಟಾರ್ಥ ಸಿದ್ದಿಗೆ ವಿವಿಧ ಹರಕೆ ಕಾಣಿಕೆ ಒಪ್ಪಿಸಿ ಪ್ರಸಾದ ಸ್ವೀಕರಿಸಿದರು.

ದೇವಾಲಯದ ಆಡಳಿತ ಮಂಡಳಿ ಅಧ್ಯಕ್ಷ ಎ.ಕೆ.ಚಂದ್ರನ್, ಉಪಾಧ್ಯಕ್ಷ ಎಂ.ಕೆ.ತಂಗ, ಕಾರ್ಯದರ್ಶಿ ಅನಿಲ್ ಪಿ.ಕೆ, ಉಪ ಕಾರ್ಯದರ್ಶಿ ಸುಕುಮಾರ್ ಟಿ.ಕೆ, ಖಜಾಂಚಿ ಮಹೇಶ್ ಮೆನೋನ್, ದೇವಾಲಯದ ಪೂಜಾರಿ ಹರಿದಾಸ್ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260406-51-1792331780

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.