ನಾಪೋಕ್ಲು:ಆಟೊ ಚಾಲಕ ಝಕರಿಯ ಎಂಬುವವರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇರೆಗೆ ಸಿದ್ದಿಕ್, ಮಹಮ್ಮದ್ ಅಲಿ, ನಾಫಿ ಸೇರಿ ನಾಲ್ವರ ವಿರುದ್ಧ ಇಲ್ಲಿನ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇಲ್ಲಿಗೆ ಸಮೀಪದ ಬೇತುಗ್ರಾಮದಲ್ಲಿ ಹಲ್ಲೆ ನಡೆದಿದ್ದು, ಹಲ್ಲೆಗೊಳಗಾದ ಝಕರಿಯ ತೀವ್ರ ರಕ್ತಸ್ರಾವದಿಂದ ಚರಂಡಿಗೆ ಬಿದ್ದಿದ್ದನ್ನು ಗಮನಿಸಿದ ಸ್ಥಳೀಯರು ಹಾಗೂ ಪೊಲೀಸರು ಅವರಿಗೆ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಕೊಡಿಸಿ, ಬಳಿಕ ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಆಸ್ತಿ ವಿಚಾರಕ್ಕೆ ವೈಷಮ್ಯದಿಂದ ಈ ಹಲ್ಲೆ ನಡೆದಿದೆ ಎನ್ನಲಾಗಿದೆ. ಈಚೆಗೆ ಬಲ್ಲಮಾವಟಿ ಗ್ರಾಮದಲ್ಲಿನ ಹಿಂದೂ ಸಂಗಮ ಕಾರ್ಯಕ್ರಮದಲ್ಲಿ ಬಂಟಿಂಗ್ ಕಟ್ಟುವ ವೇಳೆ ಗೌತಮ್ ಎಂಬಾತನಿಗೆ ಆರೋಪಿಗಳು ಹಲ್ಲೆ ನಡೆಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260506-51-1969841366

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.