ನಾಪೋಕ್ಲು: ಇಲ್ಲಿಗೆ ಸಮೀಪದ ಬಲಮುರಿ ಕ್ಷೇತ್ರದ ಈಶ್ವರ ದೇವಸ್ಥಾನದ ಅರ್ಚಕರಿಗೆ ದಾನಿಗಳ ನೆರವಿನಿಂದ ನಿರ್ಮಿಸಲಾದ ನೂತನ ಮನೆಯನ್ನು ಮಂಗಳವಾರ ದೇವಸ್ಥಾನದ ಆಡಳಿತ ಮಂಡಳಿಗೆ ಹಸ್ತಾಂತರಿಸಲಾಯಿತು.

ಬಲಮುರಿ ಗ್ರಾಮದ ನಿವೃತ್ತ ಮೇಜರ್ ಬೊಳ್ಳಚೆಟ್ಟಿರ ಅಪ್ಪಚ್ಚು ಹಾಗೂ ಗ್ರಾಮಸ್ಥರ ನೆರವಿನಿಂದ ನೂತನ ಮನೆ ನಿರ್ಮಿಸಿ ಅರ್ಚಕರು ಹಾಗೂ ಗ್ರಾಮಸ್ಥರ ಸಮ್ಮುಖದಲ್ಲಿ ಬೊಳ್ಳಚಟ್ಟಿರ ಸುರೇಶ್ ಅವರು ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಕೊಂಗೀರಂಡ ಸಾಧು ತಮ್ಮಯ್ಯ ಅವರಿಗೆ ಮನೆಯನ್ನು ಹಸ್ತಾಂತರಿಸಿದರು. ಏಪ್ರಿಲ್ 29 ರಂದು ಸಭೆ ನಡೆಸಿ ನೂತನ ಮನೆಯನ್ನು ಅರ್ಚಕರಿಗೆ ಹಸ್ತಾಂತರಿಸಲಾಗುವುದು ಎಂದು ಆಡಳಿತ ಮಂಡಳಿ ಅಧ್ಯಕ್ಷರು ತಿಳಿಸಿದರು. ಬಲಮುರಿ ಈಶ್ವರ ದೇವಸ್ಥಾನದ ಆಡಳಿತ ಮಂಡಳಿಯ ಪದಾಧಿಕಾರಿಗಳು ಹಾಗೂ ಸದಸ್ಯರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260415-51-2140637617

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.