ನಾಪೋಕ್ಲು: ಕೊಡಗು ಜಿಲ್ಲಾ ಗೊಲ್ಲ ಸಮಾಜದ ವತಿಯಿಂದ ಗೊಲ್ಲ ಜನಾಂಗದವರಿಗಾಗಿ ಮೇ 23 ಮತ್ತು 24ರಂದು ಇಲ್ಲಿನ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ವಾರ್ಷಿಕ ಕ್ರೀಡಾಕೂಟ ನಡೆಯಲಿದೆ.

ಶನಿವಾರ ಬೆಳಿಗ್ಗೆ 9 ಗಂಟೆಗೆ ಕ್ರೀಡಾಕೂಟದ ಉದ್ಘಾಟನೆಯನ್ನು ಕೊಡಗು ಜಿಲ್ಲಾ ಗೊಲ್ಲ ಸಮಾಜದ ಅಧ್ಯಕ್ಷ ಅರೆಯಂಡ ರಘು ಭೀಮಯ್ಯ ಮತ್ತು ಕ್ರೀಡಾ ಸಮಿತಿಯ ಅಧ್ಯಕ್ಷ ತುತ್ತಿಯಂಡ ಅಜಂತ ನಾಣಯ್ಯ ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ನಿವೃತ್ತ ಸೈನಿಕ ಪೊಂಗೆರ ಜೀವನ್ ಬೋಪಣ್ಣ, ಬೆಸ್ಕಾಂ ಇಲಾಖೆಯ ನಿವೃತ್ತ ಹಿರಿಯ ಲೆಕ್ಕಾಧಿಕಾರಿ ಬಿದ್ದಿಯಂಡ ನಂದ, ಆರೋಗ್ಯ ಇಲಾಖೆಯ ನಿವೃತ್ತ ಸ್ಟಾಫ್ ನರ್ಸ್ ಪೊನ್ನಕಂಡ ಉಷಾ ಹರೀಶ್ ಪಾಲ್ಗೊಳ್ಳಲಿದ್ದಾರೆ.

ಪುರುಷರಿಗೆ ಕ್ರಿಕೆಟ್ ಪಂದ್ಯಾಟ, ಪುರುಷರಿಗೆ ಮತ್ತು ಮಹಿಳೆಯರಿಗೆ ಪ್ರತ್ಯೇಕವಾಗಿ ಹಗ್ಗ ಜಗ್ಗಾಟ ಹಾಗೂ ಶಾಲಾ ಮಕ್ಕಳಿಗೆ ಆಟೋಟ ಸ್ಪರ್ಧೆಗಳು ನಡೆಯಲಿವೆ.

ಫೈನಲ್ ಕ್ರೀಡಾಕೂಟದ ಉದ್ಘಾಟನಾ ಸಮಾರಂಭ ಮೇ 24 ರಂದು ಭಾನುವಾರ ಬೆಳಿಗ್ಗೆ 9 ಗಂಟೆಗೆ ನಡೆಯಲಿದೆ. ಕೊಡಗು ಜಿಲ್ಲಾ ಗೊಲ್ಲ ಸಮಾಜದ ಅಧ್ಯಕ್ಷ ಅರೆಯಂಡ ರಘು ಭೀಮಯ್ಯ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶಾಸಕ ಎ.ಎಸ್. ಪೋನ್ನಣ್ಣ, ಅಣ್ಣ ಉದ್ಯಮಿ ಎಡಿಕೇರಿ ಪ್ರಸನ್ನ, ನಿವೃತ್ತ ಮುಖ್ಯ ಶಿಕ್ಷಕಿಯರಾದ ಪೈತಾಡಿಯಂಡ ಪೊನ್ನಮ್ಮ, ಪೊನ್ನಮ್ಮ, ಕೈಬ್ಲೀರ ಪಾರ್ವತಿ ಪಾಲ್ಗೊಳ್ಳಲಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-51-444180418

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.