ನಾಪೋಕ್ಲು: ಚೇರಂಬಾಣೆಯ ಗೌಡ ಮಹಿಳಾ ಒಕ್ಕೂಟದ ಮೊದಲ ವಾರ್ಷಿಕೋತ್ಸವ ಹಾಗೂ ವಿಶ್ವ ಮಹಿಳಾ ದಿನಾಚರಣೆಯನ್ನು ಮಾರ್ಚ್ 8ರಂದು ಬೆಳಿಗ್ಗೆ 10.30ಕ್ಕೆ ಕಾರುಗುಂದ ಗೌಡ ಸಮಾಜದಲ್ಲಿ ಅದ್ದೂರಿಯಿಂದ ನಡೆಸಲಾಗುವುದು ಎಂದು ಒಕ್ಕೂಟದ ಅಧ್ಯಕ್ಷೆ ಕಡ್ಲೆರ ತುಳಸಿ ಮೋಹನ್ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಮಾರಂಭವನ್ನು ಚೆಟ್ಟಿ ಮಾನಿಯ ನಿವೃತ್ತ ಪ್ರಾಧ್ಯಾಪಕಿ ಸುಳ್ಯ ಕೊಡಿ ಶಿವದೇವಿ ಅವನೀಶ್ ಚಂದ್ರ ಹಾಗೂ ಸಭಾ ಕಾರ್ಯಕ್ರಮವನ್ನು ಪೊಲೀಸ್ ವರಿಷ್ಠಾಧಿಕಾರಿ ಎಸ್.ಆರ್.ಬಿಂದುಮಣಿ ಉದ್ಘಾಟಿಸುವರು’ ಎಂದರು.

ಬೆಂಕಿ ಇಲ್ಲದ ಅಡುಗೆ ಪದಾರ್ಥಗಳ ಪ್ರದರ್ಶನವನ್ನು ಕೊಡಗು ದಕ್ಷಿಣ ಕನ್ನಡ ಒಕ್ಕಲಿಗ ಗೌಡ ಮಹಿಳಾ ಒಕ್ಕೂಟದ ಸ್ಥಾಪಕ ಅಧ್ಯಕ್ಷೆ ಪುದಿಯ ನೆರವನ ರೇವತಿ ರಮೇಶ್ ಹಾಗೂ ಕರಕುಶಲ ವಸ್ತು ಪ್ರದರ್ಶನವನ್ನು ಕುಶಾಲನಗರದ ಗೌಡ ಮಹಿಳಾ ಸ್ವ ಸಹಾಯ ಸಂಘದ ಅಧ್ಯಕ್ಷೆ ಕಲಾ ಆನಂದ್ ಕರಂದ್ಲಾಜೆ ಉದ್ಘಾಟಿಸುವರು.

ಮಹಿಳೆಯರಿಂದ ಸಿದ್ಧಪಡಿಸಿದ ಕರಕುಶಲ ವಸ್ತುಗಳ ಮತ್ತು ಖಾದ್ಯ ಪದಾರ್ಥಗಳ ಮಾರಾಟ ಮಳಿಗೆಗಳ ಮಡಿಕೇರಿ ಆಕಾಶವಾಣಿಯ ನಿವೃತ್ತ ಉದ್ಘೋಷಕಿ ಕೂಪದಿರ ಶಾರದಾ ನಂಜಪ್ಪ ಉದ್ಘಾಟಿಸುವರು. ಆರೋಗ್ಯ ತಪಾಸಣಾ ಶಿಬಿರವನ್ನು ಕಾರುಗುಂದ ಗೌಡ ಸಮಾಜದ ನಿರ್ದೇಶಕಿ ಹೇಮಲತಾ ತಾರೇಂದ್ರ ಉದ್ಘಾಟಿಸುವರು. ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕಿ ಮಿಲನ ಭರತ್ ಲೋಗೊ ಬಿಡುಗಡೆಗೊಳಿಸುವರು.

ಗೌಡ ಮಹಿಳಾ ಒಕ್ಕೂಟದ ಉಪಾಧ್ಯಕ್ಷೆ ಕೋರನ ಸುಶೀಲಾ ಅಪ್ಪಾಜಿ, ಚೇರಂಬಾಣೆಯ ಸಮೃದ್ಧಿ ಡಯಾಗ್ನೋಸ್ಟಿಕ್ ಹೆಲ್ತ್ ಕೇರ್ ಸೆಂಟರ್ ವ್ಯವಸ್ಥಾಪಕಿ ಟಿ.ಆರ್.ಹೇಮಲತಾ, ಬೆಂಗಳೂರಿನ ಗೌಡ ಯುವ ವೇದಿಕೆಯ ಅಧ್ಯಕ್ಷೆ ತಳೂರು ಮಮತಾ ಹಿತೇಶ್, ಪದ್ಮಾವತಿ ಗೌಡ ಮಹಿಳಾ ಒಕ್ಕೂಟದ ಅಧ್ಯಕ್ಷೆ ಶಾಂತಿ, ಮಕ್ಕಂದೂರು ಗೌಡ ಮಹಿಳಾ ಒಕ್ಕೂಟದ ಅಧ್ಯಕ್ಷೆ ತೂಟೆರ ರೀಟಾ ಜಯಪ್ರಕಾಶ್, ಮೂರ್ನಾಡು ಗೌಡ ಮಹಿಳಾ ಒಕ್ಕೂಟದ ಅಧ್ಯಕ್ಷೆ ಕಲ್ಲುಮುಟ್ಲು ಜಶ್ಮಿ ಚಿಂಟು ಉಪಸ್ಥಿತರಿರುವರು. ಮಧ್ಯಾಹ್ನ ಮಹಿಳೆಯರಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಗೌಡ ಮಹಿಳಾ ಒಕ್ಕೂಟದ ಉಪಾಧ್ಯಕ್ಷರಾದ ಲತಾ ಮೊಣ್ಣಪ್ಪ, ಕೂರನ ಸುಶೀಲಾ ಅಪ್ಪಾಜಿ, ಕಾರ್ಯದರ್ಶಿ ಕೇಕಡ ಪೂಜಾ ನಾಗೇಂದ್ರ, ಖಜಾಂಚಿ ಕೊಡಪಾಲು ತೀರ್ಥ ಗಣಪತಿ, ಸಹಕಾರ್ಯದರ್ಶಿ ಬೈಮನ ಜ್ಯೋತಿ ತಿಮ್ಮಯ್ಯ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260305-51-1191548004

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.