ನಾಪೋಕ್ಲು: ‘ಹಿಂದೂ ಸಂಗಮ ಕಾರ್ಯಕ್ರಮ ಆಯೋಜನೆ ವೇಳೆ ಅಹಿತಕರ ಘಟನೆ ನಡೆದಿ ದ್ದು, ಕಿಡಿಗೇಡಿಗಳಿಗೆ ಶಿಕ್ಷೆ ಆಗಬೇಕು’ ಎಂದು ಸಂಸದ ಯದುವೀರ್ ಕೃಷ್ಣದತ್ತ ಒಡೆಯರ್ ಒತ್ತಾಯಿಸಿದರು.

ಇಲ್ಲಿನ ಪ್ರವಾಸಿ ಮಂದಿರದಲ್ಲಿ ಭಾನುವಾರ ಆಯೋಜಿಸಲಾಗಿದ್ದ ಸಭೆಯಲ್ಲಿ ಮಾತನಾಡಿದ ಅವರು, ‘ರಾಜ್ಯ ಸರ್ಕಾರ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲವಾಗಿದೆ. ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.

ಈ ಭಾಗದಲ್ಲಿ ಹಿಂದೂಪರ ಸಂಘಟನೆಗಳ ಕಾರ್ಯಕರ್ತರಿಗೆ ಬದುಕಲು ಕಷ್ಟ ಆಗುತ್ತಿದೆ ಎಂಬುದು ಗಂಭೀರವಾದ ವಿಚಾರ. ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದರು.

ಬಿಜೆಪಿ ಮುಖಂಡ ಮನು ಮುತ್ತಪ್ಪ ಮಾತನಾಡಿ, ‘ಹಿಂದೂ ಬಾಂಧವರು ನಾಪೋಕ್ಲು ಪಟ್ಟಣಕ್ಕೆ ಬರಲು ಹಿಂದೇಟು ಹಾಕುವಂತಾಗಿದೆ. ಪೊಲೀಸ್ ಇಲಾಖೆ ನಿಷ್ಕ್ರಿಯವಾಗಿದೆ. ಹಿಂದದೂ ಕಾರ್ಯಕರ್ತರ ಮೇಲೆ ಹತ್ತಾರು ಕಾನೂನು ಹೇರಲಾಗುತ್ತಿದೆ. ಒಂದು ಕೋಮಿನವರಿಗೆ ಒಂದು ಕಾನೂನು, ಬೇರೆ ಕೋಮಿನವರಿಗೆ ಮತ್ತೊಂದು ಕಾನೂನು ಹೇರಿ ತಾರತಮ್ಯ ಮಾಡಲಾಗುತ್ತಿದೆ’ ಎಂದು ದೂರಿದರು.

ಹಿಂದೂ ಸಂಗಮದ ಬಂಟಿಂಗ್ಸ್ ಇರಿಸಿಕೊಳ್ಳಲು ಮೂರು ದಿನ ಕಾಲಾವಕಾಶ ನೀಡುತ್ತಿಲ್ಲ ಎಂದು ತಿಳಿಸಿದರು.

ಸಂಸದ ಯದುವೀರ್ ಪ್ರತಿಕ್ರಿಯಿಸಿ, ಎಲ್ಲರಿಗೂ ಒಂದೇ ಕಾನೂನು ಪಾಲನೆ ಮಾಡುವಂತಾಗಬೇಕು. ತಕ್ಷಣ ಕೋಮುವಾದಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಎಲ್ಲರನ್ನು ಸಮಾನವಾಗಿ ಪರಿಗಣಿಸಿ ಎಂದು ಪೊಲೀಸ್ ಇಲಾಖೆಗೆ ಸೂಚಿಸಿದರು.

ಬಿಜೆಪಿ ಮುಖಂಡ ಶಾಸಕ ಅಪ್ಪಚ್ಚು ರಂಜನ್, ಹಿಂದೂ ಸಂಘಟನೆಯ ಪ್ರಮುಖರು, ಪಿಎಸ್ಐ ರಾಘವೇಂದ್ರ, ಗ್ರಾಮ ಪಂಚಾಯತಿ ಸದಸ್ಯರು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260302-51-833062137

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.