ನಾಪೋಕ್ಲು: ಇಲ್ಲಿಗೆ ಸಮೀಪದ ಕಕ್ಕಬ್ಬೆಯ ಶ್ರೀಪಾಡಿ ಇಗ್ಗುತ್ತಪ್ಪ ದೇವಾಲಯದ ಅಷ್ಟಬಂಧ ಬ್ರಹ್ಮ ಕಲಶೋತ್ಸವಕ್ಕೆ ವಿಶೇಷ ಪ್ರಾರ್ಥನೆಯೊಂದಿಗೆ ಈಚೆಗೆ ಚಾಲನೆ ನೀಡಲಾಯಿತು.

ನೀಲೇಶ್ವರ ಉಚ್ಚಿಲತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಒಂದು ವಾರ ನಡೆದ ಅಷ್ಟಬಂದ ಬ್ರಹ್ಮಕಲಶ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಪಾಡಿ ಇಗ್ಗುತ್ತಪ್ಪ ದೇವಾಲಯದಲ್ಲಿ ಸಾಮೂಹಿಕ ಪ್ರಾರ್ಥನೆಯೊಂದಿಗೆ ತಕ್ಕ ಮುಖ್ಯಸ್ಥರು ಹಾಗೂ ಭಕ್ತ ಜನ ಸಂಘದ ಅಧ್ಯಕ್ಷ ಪರದಂಡ ಸುಮನ್ ಸುಬ್ರಮಣಿ ವಿಶೇಷ ಪ್ರಾರ್ಥನೆ ಸಲ್ಲಿಸಿ ಧಾರ್ಮಿಕ ಪೂಜಾ ವಿಧಿ ವಿಧಾನಕ್ಕೆ ಅನುವು ಮಾಡಿಕೊಟ್ಟರು.

ಅಂಕುರಾರ್ಪಣೆ, ಪ್ರಾಸಾದ ಶುದ್ಧಿ ವಾಸ್ತು ರಾಕ್ಷೋಗ್ನ ಹೋಮ, ವಾಸ್ತು ಬಲಿ ಜರುಗಿದವು. ಗಣಪತಿ ಹೋಮ, ಅಂಕುರ ಪೂಜೆ, ಬಿಂಬಶುದ್ಧಿ, ಕಲಶ ಪೂಜೆ, ಬಿಂಬಶುದ್ಧಿ ಕಲಶಾಭಿಷೇಕ ಪ್ರಾಯಶ್ಚಿತ ಹೋಮ, ಪ್ರೋಕ್ತ ಹೋಮ, ಹೋಮ ಕಲಶಾಭಿಷೇಕ, ಅಂಕುರ ಪೂಜೆ, ದುರ್ಗಾ ನಮಸ್ಕಾರ ಪೂಜೆಗಳು ನಿರಂತರ ನೆರವೇರಿದವು.

ಇದಕ್ಕೂ ಮೊದಲು ನೀಲೇಶ್ವರ ಉಚ್ಚಿಲತಾಯ ಪದ್ಮನಾಭ ತಂತ್ರಿಗಳನ್ನು ಚಂಡೆ ಮೇಳಗಳೊಂದಿಗೆ ಸಾಂಪ್ರದಾಯಿಕವಾಗಿ ಸ್ವಾಗತಿಸಲಾಯಿತು. ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಬಾಚಮಂಡ ರಾಜ ಪೂವಣ್ಣ ಹಾಗೂ ಸುಮನ್ ಸುಬ್ರಮಣಿ ಅವರು ಪೂಜಾ ಕಾರ್ಯಗಳ ಬಗ್ಗೆ ಮಾಹಿತಿ ನೀಡಿ, ಭಕ್ತರು ಅಧಿಕ ಸಂಖ್ಯೆಯಲ್ಲಿ ಭಾಗವಹಿಸಿ ದೇವರ ಕೃಪೆಗೆ ಪಾತ್ರರಾಗಬೇಕೆಂದು ಮನವಿ ಮಾಡಿಕೊಂಡರು.

ಭಕ್ತ ಜನ ಸಂಘದ ಕಾರ್ಯದರ್ಶಿ ಬಟ್ಟೀರ ಚೊಂದಮ್ಮ ಮೇದಪ್ಪ, ಖಜಾಂಜಿ ಅಂಜಪರವಂಡ ಕುಶಾಲಪ್ಪ, ಮಾಜಿ ಖಜಾಂಜಿ ನಬುಡುಮಂಡ ಸುಬ್ರಮಣಿ, ನಿರ್ದೇಶಕ ಪರದಂಡ ನರೇಂದ್ರ, ಪರದಂಡ ರಮೇಶ್, ಅನ್ನಡಿಯoಡ ದಿಲೀಪ್ ಕುಮಾರ್, ಮಾಜಿ ಅಧ್ಯಕ್ಷ ಕಾಂಡಂಡ ಜೋಯಪ್ಪ, ಕಣಿಯರ ನಾಣಯ್ಯ, ಪಾರುಪತ್ತೆಗಾರ ಪರದಂಡ ಪ್ರಿನ್ಸ್, ಉದಿಯಂಡ ಸುಭಾಷ್, ಬಟ್ಟಿರ ಮೇದಪ್ಪ, ಕಾಂಡಂಡ ಉಷಾ ಜೋಯಪ್ಪ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260525-51-829327586

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.