ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ನಾಪೋಕ್ಲು | ಮಳೆ-ಮೋಡ ಆತಂಕ-ಬೆಳೆಗಾರರಿಗೆ ಕಾಫಿ ಒಣಗಿಸುವ ಚಿಂತೆ

Published 1 ಜನವರಿ 2024, 14:45 IST
Last Updated 1 ಜನವರಿ 2024, 14:45 IST
ಅಕ್ಷರ ಗಾತ್ರ

ನಾಪೋಕ್ಲು:  ಕಾಫಿ ಬೆಳೆಗಾರರಿಗೆ  ಮೋಡ  ಕವಿದ ವಾತಾವರಣ, ತುಂತುರು ಮಳೆ ಸಂಕಷ್ಟ ತಂದೊಡ್ಡಿದೆ. ಗ್ರಾಮೀಣ ಪ್ರದೇಶದ ಹಲವೆಡೆ ಕೊಯ್ಲು ಆರಂಭಗೊಂಡಿದ್ದು, ಬಿಸಿಲಿನ ಕೊರತೆಯಿಂದ ರೈತರು ಬೀನ್‌ಗಳನ್ನು ಒಣಗಿಸಲು ಸಮಸ್ಯೆ ಎದುರಿಸುತ್ತಿದ್ದಾರೆ.

ಸೋಮವಾರ ದಿನವಿಡೀ ಮೋಡದ ವಾತಾವರಣ ಇತ್ತು. ಸಂಜೆಯ ವೇಳೆಗೆ ಕೆಲವು ಭಾಗಗಳಲ್ಲಿ ಮಳೆಹನಿ ಸುರಿದಿದಿರುವುದು, ಕಾಫಿ ಬೆಳೆಗಾರರಲ್ಲಿ ಆತಂಕ ಸೃಷ್ಟಿಸಿತು.

ಮನೆಯಂಗಳದಲ್ಲಿ, ಕಣದಲ್ಲಿ ಮಾತ್ರವಲ್ಲದೇ ಬೆಳೆಗಾರರು ಕೊಯ್ಲು ಮಾಡಿದ ಕಾಫಿಯನ್ನು ಒಣಗಿಸಲು ಹುಲ್ಲುಗಾವಲು, ಮೈದಾನಗಳನ್ನೂ ಬಳಸುತ್ತಿದ್ದಾರೆ. ತುಂತುತು ನೀರಾವರಿ ಕೈಗೊಂಡ ರೈತರ ತೋಟಗಳಲ್ಲಿ ಕಾಫಿ ಬಹುತೇಕ ಹಣ್ಣಾಗಿವೆ. ಹಿಂದಿನ ವರ್ಷ ಮಳೆಯೂ ಬೇಗನೆ ಸುರಿದಿರುವುದರಿಂದ ಕಾಫಿ ಹಣ್ಣಾಗಿದ್ದು ರೈತರು ಕೊಯ್ಲು ಕೆಲಸದಲ್ಲಿ ತೊಡಗಿದ್ದಾರೆ.ಆದರೆ ಒಣಗಿಸಲು ಬಿಸಿಲಿನ ಕೊರತೆ ಕಾಡುತ್ತಿದೆ.

ವಾರಗಟ್ಟಲೆ ಬಿಸಿಲಿನ ತಾಪವೂ ಇಲ್ಲದೆ ಕಾಫಿಯನ್ನು ಒಣಗಿಸುವುದು ಕಷ್ಟಕರವಾಗಿದೆ. ರೋಬಸ್ಟಾ ಕಾಫಿ ಹಲವೆಡೆ ಹಣ್ಣಾಗಿದೆ. ಮಳೆಯಿಂದಾಗಿ ಹಣ್ಣಾದ ಫಸಲು ಉದುರುತ್ತಿವೆ. ಕೊಯ್ಲಿನ ಜೊತೆಗೆ ಉದುರಿದ ಕಾಫಿ ಬೀಜಗಳನ್ನು ಹೆಕ್ಕುವುದು ಕಷ್ಟಕರವಾದ ಕೆಲಸ.ಬೇಗ ಕೊಯ್ಲು ಪೂರೈಸಿದರೂ ಒಣಗಿಸುವುದು ಕಷ್ಟಕರವಾಗುತ್ತಿದೆ ಎಂದು ಸ್ಥಳೀಯ ಬೆಳೆಗಾರ ಮಾದಪ್ಪ ಹೇಳಿದರು.ಎಂದರು.

ಹಲವರ ಕಣಗಳಲ್ಲಿ ಕೊಯ್ಲು ಮಾಡಿದ ಕಾಫಿಯನ್ನು ಒಣಗಲು ಹಾಕಿದ್ದು ,ಮಳೆ ಮೋಡದಿಂದಾಗಿ ಒಣಗದೆ ಹಾಗೆ ಉಳಿದಿದೆ. ಮಳೆ ಬಂದರೆ ಎಂಬ ಭಯದಿಂದ ಪ್ರತಿದಿನ ಹರಡುವುದು, ಮುಚ್ಚುವುದು ಮಾಡಬೇಕಿದೆ. ಬಿಸಿಲಿನ ಕೊರತೆಯಿಂದ ಕಾಫಿ ಕೊಯ್ಲು ಮಾಡುವುದು ಸಮಸ್ಯೆಯಾಗಿ ಕಾಡುತ್ತಿದೆ. ಪದೇಪದೇ ಮೋಡದ ವಾತಾವರಣ ಬೆಳೆಗಾರರಿಗೆ ಮತ್ತಷ್ಟು ಸಮಸ್ಯೆ ತಂದೊಡ್ಡಿದೆ ಎಂದು ಹಲವು ಬೆಳೆಗಾರರು ಅಳಲು ತೋಡಿಕೊಂಡರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT