ನಾಪೋಕ್ಲು: ಕೊಡವ ಜನಾಂಗದ ಆಚಾರ, ವಿಚಾರ, ಪದ್ಧತಿ, ಪರಂಪರೆ, ಸಂಸ್ಕೃತಿ ವಿಭಿನ್ನವಾಗಿದ್ದು, ಆಟ್ ಪಾಟ್ ಶಿಬಿರಗಳ ಮೂಲಕ ಯುವ ಜನಾಂಗ ಅದನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯುವ ಕೆಲಸ ಮಾಡಬೇಕಿದೆ ಎಂದು ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಅಜ್ಜಿನಿಕಂಡ ಮಹೇಶ್ ನಾಚಯ್ಯ ಹೇಳಿದರು.

ಇಲ್ಲಿನ ಕೊಡವ ಸಮಾಜದ ಹರದಾಸ ಅಪ್ಪನೆರವಂಡ ಅಪ್ಪಚ್ಚ ಕವಿ ಸಭಾಂಗಣದಲ್ಲಿ ಮಂಗಳವಾರ ನಡೆದ ಆಟ್ ಪಾಟ್ ಶಿಬಿರದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ಕೊಡವ ಜನಾಂಗದ ಭಾಷೆ, ಸಂಸ್ಕೃತಿ ,ಆಚಾರ, ವಿಚಾರಗಳು ವಿಭಿನ್ನವಾಗಿದೆ. ಎಲ್ಲಾ ಸಮುದಾಯದವರು ಮೆಚ್ಚುವಂತಹ ಸಂಸ್ಕೃತಿಯಾಗಿದೆ. ಶಿಬಿರಾರ್ಥಿಗಳು ಶಿಬಿರದಲ್ಲಿ ಕಲಿತ ಉತ್ತಮ ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಕೊಡವ ಜನಾಂಗ ಸಮುದಾಯಕ್ಕೆ ಉತ್ತಮವಾದುದನ್ನು ಬಯಸಬೇಕು. ಭಾಷೆ, ಸಂಸ್ಕೃತಿಯನ್ನು ಮೂಲೆಗುಂಪು ಮಾಡಬಾರದು ಎಂದರು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಮಾತನಾಡಿದ ಹಿರಿಯ ಕಲಾವಿದೆ ಐಮುಡಿಯಂಡ ರಾಣಿ ಮಾಚಯ್ಯ, ಕೊಡವ ಸಂಸ್ಕೃತಿಯನ್ನು ಎಲ್ಲೆಡೆ ಪಸರಿಸುವಂತಹ ಕೆಲಸವನ್ನು ಮಾಡಬೇಕಿದೆ. ದೇಶದಲ್ಲಿ ಕೊಡವ ಜನಾಂಗಕ್ಕೆ ಉತ್ತಮ ಹೆಸರಿದೆ. ಕಲೆ, ಸಂಸ್ಕೃತಿಗೆ ದೇಶದ ಯಾವ ಮೂಲೆಯಲ್ಲಾದದರೂ ಉತ್ತಮ ಗೌರವ ಲಭಿಸುತ್ತದೆ ಎಂದು ತಮ್ಮ ಅನುಭವವನ್ನು ಹಂಚಿಕೊಂಡರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕೊಡವ ಸಮಾಜದ ಅಧ್ಯಕ್ಷ ಮುಂಡಂಡ ಸಿ. ನಾಣಯ್ಯ ಮಾತನಾಡಿ, ಚೇನಂಡ ಹಾಕಿ ಕಪ್ ಪಂದ್ಯಾವಳಿಯಲ್ಲಿ ಆಟ್ –ಪಾಟ್ ಶಿಬಿರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಕೊಡವ ಸಮಾಜದ ಅಪ್ಪನೆರವಂಡ ಅಪ್ಪಚ್ಚ ಕವಿ ಸಭಾಂಗಣದಲ್ಲಿ ಶಿಬಿರವನ್ನು ವ್ಯವಸ್ಥಿತವಾಗಿ ಆಯೋಜಿಸಲಾಯಿತು. ಶಿಬಿರ ಕೇವಲ ವೇದಿಕೆಯ ಭಾಷಣಗಳಿಗೆ ,ಮಾಧ್ಯಮಗಳ ಪ್ರಸಾರಕ್ಕೆ ಸೀಮಿತವಾಗಬಾರದು. ಅನುಷ್ಠಾನಕ್ಕೆ ತರಬೇಕಿದೆ. ಇಂತಹ ಕಾರ್ಯಕ್ರಮಗಳಿಗೆ ಪೋಷಕರ ಸಹಕಾರ ಅಗತ್ಯ ಎಂದರು.

ಕಾರ್ಯಕ್ರಮದಲ್ಲಿ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಅಜ್ಜಿನಿಕಂಡ ಮಹೇಶ್ ನಾಚಯ್ಯ , ಹಿರಿಯ ಕಲಾವಿದೆ ಐಮುಡಿಯಂಡ ರಾಣಿ ಮಾಚಯ್ಯ ಹಾಗೂ ತರಬೇತಿದಾರರನ್ನು ಕೊಡವ ಸಮಾಜದಿಂದ ಗೌರವಿಸಲಾಯಿತು. ಕೊಡವ ಸಮಾಜ ಕಾರ್ಯದರ್ಶಿ ಕುಲ್ಲೇಟಿರ ಅಜಿತ್ ನಾಣಯ್ಯ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕೊಡವ ಸಮಾಜದ ಉಪಾಧ್ಯಕ್ಷ ಕರವಂಡ ಲವ ನಾಣಯ್ಯ, ಖಜಾಂಚಿ ಚೌರಿರ ಉದಯ, ತರಬೇತಿದಾರರಾದ ಚೀಯಕ ಪೂವಂಡಡ ದೇವಯ್ಯ , ಪಾಡೇಯಂಡ ಕಟ್ಟಿ ಕುಶಾಲಪ್ಪ ಕೊಡವ ಸಮಾಜದ ಹಾಗೂ ಪೊಮ್ಮಕ್ಕಡ ಪರಿಷತ್ತಿನ ನಿರ್ದೇಶಕರು ಭಾಗವಹಿಸಿದ್ದರು. ಶಿಬಿರಾರ್ಥಿಗಳಿಂದ ಬೊಳಕಾಟ್, ಕೋಲಾಟ್, ಉಮ್ಮತ್ತಾಟ್ ಪ್ರದರ್ಶನ ನಡೆಯಿತು

ಗಣ್ಯರು ಶಿಬಿರಾರ್ಥಿಗಳಿಗೆ ಅರ್ಹತಾ ಪತ್ರವನ್ನು ವಿತರಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-51-1876622827

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.