ನಾಪೋಕ್ಲು: ‘ನಾಪೋಕ್ಲು ಹೋಬಳಿ ವ್ಯಾಪ್ತಿಯಲ್ಲಿ ನಿರಂತರ ವಿದ್ಯುತ್ ಕಡಿತವಾಗುತ್ತಿದ್ದು ಜನಸಾಮಾನ್ಯರು ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ವಿದ್ಯುತ್ ಸಮಸ್ಯೆಯನ್ನು ಕೂಡಲೇ ಬಗೆಹರಿಸಬೇಕು’ ಎಂದು ಬಿಜೆಪಿ ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖರು ಹಾಗೂ ಸಾರ್ವಜನಿಕರು ಒತ್ತಾಯಿಸಿದರು.

ಇಲ್ಲಿನ ಸೆಸ್ಕ್ ಕಚೇರಿಯ ಎದುರು ವಿದ್ಯುತ್ ಇಲಾಖೆಯ ವಿರುದ್ಧ ಶುಕ್ರವಾರ ಧಿಕ್ಕಾರ ಕೂಗಿ ಪ್ರತಿಭಟನೆ ಮಾಡಿ, 15 ದಿನಗಳ ಒಳಗಾಗಿ ವಿದ್ಯುತ್ ಸಮಸ್ಯೆ ಪರಿಹರಿಸದಿದ್ದಲ್ಲಿ ಕಚೇರಿಗೆ ಬೀಗ ಹಾಕಿ ತೀವ್ರ ತರಹದ ಪ್ರತಿಭಟನೆ ಮಾಡುವುದಾಗಿ ಎಚ್ಚರಿಸಿದರು.

ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖ ಶಿವಚಾಳಿಯಂಡ ಅಂಬಿ ಕಾರ್ಯಪ್ಪ ಮಾತನಾಡಿ, ‘ಕಳೆದ ಕೆಲವು ದಿನಗಳಿಂದ ನಾಪೋಕ್ಲು ವ್ಯಾಪ್ತಿಯಲ್ಲಿ ನಿರಂತರವಾಗಿ ವಿದ್ಯುತ್ ಕಡಿತವಾಗುತ್ತಿದೆ. ವಿದ್ಯುತ್ ಅವಲಂಬಿತ ಕೆಲಸ ಕಾರ್ಯಗಳು ಯಾವುದೂ ಸರಿಯಾಗಿ ನಡೆಯುತ್ತಿಲ್ಲ. ವಿದ್ಯುತ್ ಕಡಿತದ ಅವಧಿಯನ್ನು ನಿಗದಿಗೊಳಿಸಿ ಉಳಿದ ಸಮಯದಲ್ಲಿ ಸರಾಗವಾಗಿ ವಿದ್ಯುತ್ ಪೂರೈಕೆ ಮಾಡಿ ಎಂದು ಆಗ್ರಹಿಸಿ 15 ದಿನಗಳ ಒಳಗಾಗಿ ವಿದ್ಯುತ್ ಸಮಸ್ಯೆ ಪರಿಹರಿಸದಿದ್ದಲ್ಲಿ ಕಚೇರಿಗೆ ಬೀಗ ಹಾಕಿ ತೀವ್ರ ತರಹದ ಪ್ರತಿಭಟನೆ ಮಾಡಲಾಗುವುದು’ ಎಂದು ತಿಳಿಸಿದರು.

ಕೆಟೋಳಿರ ಹರೀಶ್ ಪೂವಯ್ಯಮಾತನಾಡಿ, ‘ಕೆಲವು ವರ್ಷಗಳಿಂದ ಹೋಬಳಿ ವ್ಯಾಪ್ತಿಯ ವಿದ್ಯುತ್ ಸಮಸ್ಯೆ ಬಗ್ಗೆ ಹರಿದಿಲ್ಲ. ಪ್ರತಿ ವರ್ಷ ಒಂದಲ್ಲ ಒಂದು ಕಾರಣ ಹೇಳಿ ವಿದ್ಯುತ್ ಕಡಿತ ಮಾಡಲಾಗುತ್ತಿದೆ. ಮಳೆಗಾಲದಲ್ಲಿ ಒಂದು ರೀತಿಯ ಸಮಸ್ಯೆ ಆದರೆ ಬೇಸಿಗೆಯಲ್ಲಿಯೂ ಸಮಸ್ಯೆ ಪರಿಹಾರವಾಗುತ್ತಿಲ್ಲ.ವಿದ್ಯುತ್ ಸಮಸ್ಯೆಗೆ ಶೀಘ್ರ ಪರಿಹಾರ ಕೊಡಿ’ ಎಂದು ಒತ್ತಾಯಿಸಿದರು.

ಮುಕ್ಕಾಟಿರ ವಿನಯ್ ಮಾತನಾಡಿ, ‘ನೆಲಜಿಗ್ರಾಮದಲ್ಲಿ ವೋಲ್ಟೇಜ್ ಇಲ್ಲದೆ ಸಮಸ್ಯೆಯಾಗುತ್ತಿದೆ. ವಿದ್ಯುತ್ ಚಾಲಿತ ಯಾವ ಉಪಕರಣಳು ಕಾರ್ಯ ನಿರ್ವಹಿಸುತ್ತಿಲ್ಲ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಿದೆ. ವ್ಯವಸ್ಥಿತವಾಗಿ ವಿದ್ಯುತ್ ಪೂರೈಕೆ ಮಾಡುವ ಕ್ರಮ ಕೈಗೊಳ್ಳಿ’ ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಪಾಲ್ಗೊಂಡ ಉಳಿದವರೂ ವಿದ್ಯುತ್ ಸಮಸ್ಯೆಯ ಬಗ್ಗೆ ನಮ್ಮ ದೂರನ್ನು ಹೇಳಿಕೊಂಡರು.

ಸಹಾಯಕ ಕಾರ್ಯಪಾಲಕ ಎಂಜಿನಿಯರ್ ವಿನಯ್ ಕುಮಾರ್ ಪ್ರತಿಕ್ರಿಯಿಸಿ, ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ಇದ್ದು ಮೂರು ಮಂದಿ ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜಿಸಲಾಗುವುದು’ ಎಂದರು. ಸಹಾಯಕ ಎಂಜಿನಿಯರ್ ಹರೀಶ್ ಎಚ್.ಆರ್. ಇದ್ದರು

ಪ್ರತಿಭಟನೆಯಲ್ಲಿ ಪಾಡಿಯಮ್ಮಂಡ ಮನು ಮಹೇಶ್, ಕುಲ್ಲೆಟಿರ ಅಜಿತ್, ಪಾಲಚಂಡ ಸೀಮಾ, ಅರೆಯಡ ಅಶೋಕ್, ಕಂಗಾಂಡ ಜಾಲಿ ಪೂವಪ್ಪ, ಕುಂಡಿಯೋಳಂಡ ವಿಶು ಪೂವಯ್ಯ, ಬಾಲೆಯಡ ಮೇದಪ್ಪ, ಶಿವಚಾಳಿಯಿಂದ ಕಿಶೋರ್ ಬೋಪಣ್ಣ, ಪ್ರಸಾದ್, ಡಾಲಿ ಅಚ್ಚಪ್ಪ, ಕನ್ನಂಬೀರ ಸುಧಿ, ಸುಕುಮಾರ್, ಮುತ್ತಣ್ಣ ,ಸುಬ್ರಮಣಿ ,ತಮ್ಮಯ್ಯ, ಕಾರ್ಯಪ್ಪ , ಭುವನ್, ಪೊನ್ನಪ್ಪ ,ಮಧು, ರಾಜೇಶ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260418-51-1853211807

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.