ನಾಪೋಕ್ಲು: ಗ್ರಾಮೀಣ ಭಾಗದಲ್ಲಿ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸುತ್ತಾ ಸಮಾಜದ ಏಳಿಗೆಗೆ ಶ್ರಮಿಸುತ್ತಿರುವ ಪ್ರಭಾಕರ ಕೇಕುಣ್ಣಾಯ ಅವರನ್ನು ಗ್ರಾಮಸ್ಥರು ಸನ್ಮಾನಿಸುತ್ತಿರುವುದು ಶ್ಲಾಘನೀಯ ಎಂದು ಬಿಜೆಪಿ ಮುಖಂಡ ಕೆ.ಜಿ. ಬೋಪಯ್ಯ ಹೇಳಿದರು.

ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಭಾಗಮಂಡಲದ ಕೃಷಿಪತ್ತಿನ ಹೊಸೂರು ಡಿ. ಜೋಯಪ್ಪ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಧಾರ್ಮಿಕ ಸೇವಾರ್ಥ ಪ್ರಶಸ್ತಿ ಪಡೆದ ಪ್ರಭಾಕರ ಕೇಕುಣ್ಣಾಯ ಅವರ ಅಭಿನಂದನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸನ್ಮಾನ ಸ್ವೀಕರಿಸಿದ ನಿವೃತ್ತ ಶಿಕ್ಷಕ ಪ್ರಭಾಕರ ಕೇಕುಣ್ಣಾಯ ಮಾತನಾಡಿ, ‘30 ವರ್ಷಗಳಿಂದ ಊರಿನ ಶ್ರೇಯೋಭಿವೃದ್ಧಿಗಾಗಿ ಧಾರ್ಮಿಕ ಸೇವೆ ನಡೆಸಿರುವುದು ಸಂತಸ ತಂದಿದೆ’ ಎಂದರು.

ಕೃಷಿಪತ್ತಿನ ಸಹಕಾರ ಸಂಘದ ಅಧ್ಯಕ್ಷ ಹೊಸೂರು ಸತೀಶ್ ಕುಮಾರ್ ಮಾತನಾಡಿದರು. ಕುದುಪಜೆ ಕುಲದೀಪ್ ಅಧ್ಯಕ್ಷತೆ ವಹಿಸಿದ್ದರು. ಪ್ರಮುಖರಾದ ನಾಗೇಶ್ ಕುಂದಲ್ಪಾಡಿ, ಕಾಳನ ರವಿ, ಪಿ.ಎಂ. ರಾಜೀವ್, ರವಿ ಹೆಬ್ಬಾರ್, ಬಿಜೆಪಿ ಶಕ್ತಿ ಕೇಂದ್ರದ ಚಲನ್ ನಿಡ್ಯಮಲೆ, ಸುಭಾಷ್, ಜೀವನ್, ಜಲಜ ಉಪಸ್ಥಿತರಿದ್ದರು.

ಸಮಾಜದ ಮುಖ್ಯ ವಾಹಿನಿಯಲ್ಲಿ ಧಾರ್ಮಿಕ ಕ್ಷೇತ್ರದಲ್ಲಿ ಸಾಧನೆ ಮಾಡಿದ ಕಲ್ಲುತಿರಿಕೆ ಪ್ರಭಾಕರ ಕೇಕುಣ್ಣಾಯ ಅವರಿಗೆ ಕನ್ನಡ ಫಿಲಂ ಚೇಂಬರ್ ವತಿಯಿಂದ ಮೈಸೂರಿನಲ್ಲಿ ಈಚೆಗೆ ಧಾರ್ಮಿಕ ಸೇವಾರ್ಥ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿತ್ತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260325-51-1629447401

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.