ಶುಕ್ರವಾರ, 2 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಾಯಿಯ ಪ್ರಾಣ ಉಳಿಸಿದ್ದ ವಿದ್ಯಾರ್ಥಿಗೆ ರಾಷ್ಟ್ರೀಯ ಶೌರ್ಯ ಪ್ರಶಸ್ತಿ

Last Updated 12 ಜನವರಿ 2023, 7:06 IST
ಅಕ್ಷರ ಗಾತ್ರ

ಶನಿವಾರಸಂತೆ: ಚಾಲನೆಯಲ್ಲಿದ್ದ ಹಿಟ್ಟಿನ ಗಿರಣಿ ಬೆಲ್ಟ್‌ಗೆ ಆಕಸ್ಮಿಕವಾಗಿ ತಾಯಿಯ ತಲೆ ಸಿಲುಕಿದಾಗ ಸಮಯ ಪ್ರಜ್ಞೆ ಮೆರೆದು ತಾಯಿಯ ಪ್ರಾಣ ಉಳಿಸಿದ ವಿದ್ಯಾರ್ಥಿ ದೀಕ್ಷಿತ್ (9) 2022-23ನೇ ಸಾಲಿನ ರಾಷ್ಟ್ರೀಯ ಶೌರ್ಯ ಪ್ರಶಸ್ತಿಗೆ ಪಾತ್ರನಾಗಿದ್ದಾನೆ.

ದೀಕ್ಷಿತ್ ತಾಯಿ ಅರ್ಪಿತಾ 2022 ನವಂಬರ್ 24ರಂದು ಕೂಡ್ಲೂರು ಗ್ರಾಮದ ಹಿಟ್ಟಿನ ಗಿರಣಿಯಲ್ಲಿ ಅಕ್ಕಿ ಪುಡಿ ಮಾಡಿಸುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ಚಾಲನೆಯಲ್ಲಿದ್ದ ಗಿರಣಿಯ ಬೆಲ್ಟ್‌ಗೆ ಅವರ ತಲೆ ಸಿಲುಕಿಕೊಂಡು, ಜೋರಾಗಿ ಕಿರುಚಿಕೊಂಡರು. ಗಿರಣಿ ಪಕ್ಕದಲ್ಲಿ ಆಟವಾಡುತ್ತಿದ್ದ ಬಾಲಕ ದೀಕ್ಷಿತ್ ತಾಯಿಯ ಕೂಗು ಕೇಳಿಸಿಕೊಂಡು ಓಡಿ ಬಂದು ಹಿಟ್ಟಿನ ಗಿರಣಿಯ ವಿದ್ಯುತ್ ಸರಬರಾಜಿನ ಸ್ವಿಚ್ ಆಫ್ ಮಾಡುವ ಮೂಲಕ ಸಮಯ ಪ್ರಜ್ಞೆ ಮೆರೆದು ತಾಯಿಯನ್ನು ಪ್ರಾಣಾಪಾಯದಿಂದ ಪಾರು ಮಾಡಿದ್ದನು.

ದೆಹಲಿಯಲ್ಲಿ ಜ. 26 ರಂದು ಗಣರಾಜ್ಯೋತ್ಸವ ಅಂಗವಾಗಿ ನಡೆಯಲಿರುವ 2022-23ನೇ ಸಾಲಿನ ರಾಷ್ಟ್ರೀಯ ಶೌರ್ಯ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ದೀಕ್ಷಿತ್ ರಾಷ್ಟ್ರೀಯ ಶೌರ್ಯ ಪ್ರಶಸ್ತಿ ಸ್ವೀಕರಿಸಲಿದ್ದಾನೆ ಎಂದು ಬಾಲಕನ ಪೋಷಕರು ತಿಳಿಸಿದ್ದಾರೆ. ಈತ ಇಲ್ಲಿನ ಕೂಡ್ಲೂರು ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 3ನೇ ತರಗತಿ ವ್ಯಾಸಂಗ ಮಾಡುತ್ತಿದ್ದಾನೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT