ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಡಿಕೇರಿ: ಮಾರ್ಚ್ 9 ರಂದು ರಾಷ್ಟ್ರೀಯ ಲೋಕ ಅದಾಲತ್

Published 8 ಫೆಬ್ರುವರಿ 2024, 4:18 IST
Last Updated 8 ಫೆಬ್ರುವರಿ 2024, 4:18 IST
ಅಕ್ಷರ ಗಾತ್ರ

ಮಡಿಕೇರಿ: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಮಾರ್ಚ್ 9ರಂದು ಕೊಡಗು ಜಿಲ್ಲೆಯ ವಿವಿಧ ಹಂತದ ಎಲ್ಲಾ ನ್ಯಾಯಾಲಯಗಳಲ್ಲಿ ‘ರಾಷ್ಟ್ರೀಯ ಲೋಕ್ ಅದಾಲತ್’ ನಡೆಯಲಿದೆ.

ಸಾರ್ವಜನಿಕರು ತಮ್ಮ ವ್ಯಾಜ್ಯಪೂರ್ವ ಮತ್ತು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳಿಗೆ ತಕ್ಷಣ ಪರಿಹಾರ ಪಡೆದುಕೊಳ್ಳಲು ಇದು ಸಹಕಾರಿಯಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಬಿ.ಪ್ರಸಾದ್ ಅವರು ತಿಳಿಸಿದ್ದಾರೆ.

ವ್ಯಾಜ್ಯ ಪೂರ್ವ ಪ್ರಕರಣಗಳು, ಚೆಕ್ ಅಮಾನ್ಯದ ಪ್ರಕರಣಗಳು, ಬ್ಯಾಂಕ್ ವಸೂಲಾತಿ, ಉದ್ಯೋಗದಲ್ಲಿ ಪುನರ್ ಸ್ಥಾಪಿಸುವ ಪ್ರಕರಣಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ಇತರೆ ರಾಜೀಯಾಗಬಲ್ಲ ಅಪರಾಧಿಕ ಪ್ರಕರಣಗಳು, ವೈವಾಹಿಕ ಪ್ರಕರಣಗಳು ಮತ್ತು ಇತರೆ ಸಿವಿಲ್ ಪ್ರಕರಣಗಳು, ಕರ್ನಾಟಕ ರಿಯಲ್ ಎಸ್ಟೇಟ್ ಪ್ರಾಧಿಕಾರಕ್ಕೆ ಸಂಬಂಧಪಟ್ಟ ಪ್ರಕರಣಗಳು(ಆರ್‌ಇಆರ್‌ಎ), ಜಿಲ್ಲಾ ಗ್ರಾಹಕರ ವೇದಿಕೆಯಲ್ಲಿನ ಪ್ರಕರಣಗಳು, ಸಾಲ ವಸೂಲಾತಿ ನ್ಯಾಯಾಧೀಕರಣದ ಪ್ರಕರಣಗಳು, ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ, ಖಾಯಂ ಜನತಾ ನ್ಯಾಯಾಲಯದಲ್ಲಿನ ಪ್ರಕರಣಗಳನ್ನು ಇಲ್ಲಿ ಪರಿಗಣಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.

ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳಲ್ಲಿ ರಾಜಿಯಾಗಬಲ್ಲ ಅಪರಾಧಿತ ಪ್ರಕರಣಗಳು, ಚೆಕ್ ಅಮಾನ್ಯದ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ಕಾರ್ಮಿಕ ವಿವಾದಗಳು, ವಿದ್ಯುತ್ ಮತ್ತು ನೀರಿನ ಶುಲ್ಕಗಳು, ವೈವಾಹಿಕ, ಭೂಸ್ವಾಧೀನ ಪ್ರಕರಣಗಳು, ವೇತನ ಮತ್ತು ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣಗಳು ಹಾಗೂ ಪಿಂಚಣಿ ಪ್ರಕರಣಗಳು, ಕಂದಾಯ ಪ್ರಕರಣಗಳು ಹಾಗೂ ರಾಜೀಯಾಗಬಲ್ಲ ಸಿವಿಲ್ ಮತ್ತು ಇತರೆ ಪ್ರಕರಣಗಳನ್ನು ಪರಿಗಣಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ನ್ಯಾಯಾಲಯದಲ್ಲಿ ಉಭಯ ಪಕ್ಷಕಾರರು ರಾಜೀ ಮಾಡಿಕೊಳ್ಳಲು ಸೂಕ್ತ ಮಾರ್ಗದರ್ಶನ ನೀಡಲಾಗುವುದು. ಇಬ್ಬರಿಗೂ ಒಪ್ಪಿಗೆಯಾಗುವಂತೆ ಪ್ರಕರಣವು ತೀರ್ಮಾನವಾಗುವುದರಿಂದ ಬಾಂಧವ್ಯವು ಉಳಿದು ವಿವಾದವು ತೀರ್ಮಾನವಾಗುತ್ತದೆ ಎಂದು ಅವರು ಹೇಳಿದ್ದಾರೆ.

ನ್ಯಾಯಾಲಯದಲ್ಲಿ ದಾಖಲಾಗದೇ ಇರುವ ಪ್ರಕರಣಗಳನ್ನು ಸಹ ರಾಜೀ ಸಂಧಾನದ ಮೂಲಕ ಬಗೆಹರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ರಾಜೀ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ನ್ಯಾಯಾಲಯ ಶುಲ್ಕವನ್ನು ಪೂರ್ಣವಾಗಿ ಮರುಪಾವತಿಸಲಾಗುವುದು. ಸಂಧಾನಕಾರರು ಸೂಚಿಸುವ ಪರಿಹಾರ ಒಪ್ಪಿಗೆಯಾದಲ್ಲಿ ಮಾತ್ರ ರಾಜೀ ಮಾಡಿಕೊಳ್ಳಬಹುದು. ಕಡಿಮೆ ಖರ್ಚಿನಲ್ಲಿ ಶೀಘ್ರ ತೀರ್ಮಾನಕ್ಕಾಗಿ ಇದೊಂದು ವಿಶೇಷ ಅವಕಾಶವಾಗಿದೆ ಎಂದು ಅವರು ತಿಳಿಸಿದ್ದಾರೆ.

 ಮಾಹಿತಿಗೆ ದೂ: 08272-222373, ಟೋಲ್ ಫ್ರೀ ಸಂಖ್ಯೆ 180042590900 ನ್ನು ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT