ಮಡಿಕೇರಿ: ರೋಟರಿ ಮಡಿಕೇರಿ ವುಡ್ಸ್ ಸಂಸ್ಥೆಯ ವತಿಯಿಂದ ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಅಂಗವಾಗಿ ಮೂವರು ಕ್ರೀಡಾಪಟುಗಳನ್ನು ಸನ್ಮಾನಿಸಲಾಯಿತು.
ಹಾಕಿ ಕ್ರೀಡೆಯಲ್ಲಿ ಉದಯೋನ್ಮುಖ ಪ್ರತಿಭೆ ಎಸ್.ಕೆ.ದೇಚಕ್ಕ, ರಾಷ್ಟ್ರಿಯ ಹಾಕಿ ತೀರ್ಪುಗಾರ ಅಯ್ಯಪ್ಪ ಹಾಗೂ ಸೆಸ್ಟೋಬಾಲ್ ಕ್ರೀಡೆಯಲ್ಲಿ ಭಾರತ ತಂಡದ ನಾಯಕತ್ವ ವಹಿಸಿದ ಮಹಮ್ಮದ್ ಶಾಹಿಲ್ ಸನ್ಮಾನಕ್ಕೆ ಪಾತ್ರರಾದರು.
ರೋಟರಿ ವುಡ್ಸ್ ಅಧ್ಯಕ್ಷ ಹರೀಶ್ ಕಿಗ್ಗಾಲ್ ಮಾತನಾಡಿ, ‘ಕ್ರೀಡೆಯಲ್ಲಿ ಸಾಕಷ್ಟು ಸಾಧನೆ ಮಾಡಿದ ಅನೇಕ ಕ್ರೀಡಾಪಟುಗಳು ಜಿಲ್ಲೆಯಲ್ಲಿದ್ದಾರೆ. ಈ ಬಾರಿ ಎಳೆಯ ಪ್ರತಿಭೆಗಳನ್ನು ಹುಡುಕಿ ಅವರಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ, ಸನ್ಮಾನ ಮಾಡಲಾಗುತ್ತಿದೆ’ ಎಂದರು.