ಗೋಣಿಕೊಪ್ಪಲು: ‘ಪ್ರಕೃತಿ ಆರಾಧನೆ ಕೊಡಗಿನ ಪ್ರಮುಖ ಧಾರ್ಮಿಕ ಸಂಸ್ಕೃತಿಯಲ್ಲಿ ಒಂದಾಗಿದೆ. ಇದರಿಂದ ಇಲ್ಲಿನ ಪ್ರಕೃತಿ ಹಾಗೂ ಸಂಸ್ಕೃತಿ ಇಂದಿಗೂ ಸಂದರವಾಗಿ ಉಳಿದಿದೆ’ ಎಂದು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಧೋಶ್ ಪೂವಯ್ಯ ಹೇಳಿದರು.

ಪೊನ್ನಂಪೇಟೆ ತಾಲ್ಲೂಕು, ಹೋಬಳಿ ಮತ್ತು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಗೋಣಿಕೊಪ್ಪಲು ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ಇರುವೈಲು ರಘುರಾಮ ಅಸ್ರಣ್ಣ ಮತ್ತು ಲೀಲಾ ಅಸ್ರಣ್ಣ ಜ್ಞಾಪಕಾರ್ಥ ದತ್ತಿ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದರು.

‘ಪ್ರಕೃತಿಯಲ್ಲಿ ನೀರು, ಗಿಡ, ಮರಗಳನ್ನು ಪೂಜಿಸುವುದು ಹಿಂದಿನಿಂದಲೂ ನಡೆದುಕೊಂಡು ಬಂದಿರುವ ಪದ್ಧತಿಯಾಗಿದೆ. ಇದರೊಂದಿಗೆ ಇಲ್ಲಿನ ಜನರು ಕೂಡ ತಮ್ಮದೇ ಆದ ರೀತಿಯಲ್ಲಿ ಜನಪದ ಹಾಡು ಮತ್ತು ನೃತ್ಯಗಳ ಮೂಲಕ ಕೊಡಗಿನ ಸಂಸ್ಕೃತಿಗೆ ಅಮೂಲ್ಯ ಕೊಡುಗೆ ನೀಡಿದ್ದಾರೆ’ ಎಂದು ಹೇಳಿದರು.

ಕೊಡವ ಜನಾಂಗದ ದುಡಿಕೊಟ್ಟ್ ಪಾಟ, ಬಾಳೋಪಾಟ, ಮಂಗಲಪಾಟ, ದೇವಡಪಾಟ, ಬೆಂದ್ ಪಾಟ, ಕೊಡಗಿನ ಜಾನಪದ ನೃತ್ಯಗಳಾದ ಉಮ್ಮತ್ತಾಟ್, ಬೊಳ್ಕಾಟ್, ಕತ್ತಿಯಾಟ್, ಪುತ್ತರಿ ಕೋಲಾಟ್ ಮುಂತಾದ ಸಮರಕಲೆಗಳು, ಅರೆ ಭಾಷೆ ಜನಾಂಗದವರ ಸೋಬಾನೆ ಹಾಡು, ಒಕ್ಕಲಿಗ ಜನಾಂಗದ ಸಿಡಿಯಾಟ್, ಸುಗ್ಗಿ ಕುಣಿತ, ಯರವ ಮತ್ತು ಕುರುಬರ ಹಾಡು ಮತ್ತು ನೃತ್ಯಗಳು ಅಲ್ಲದೆ ಹೊರ ಜಿಲ್ಲೆಗಳಿಂದ ಬಂದು ನೆಲೆ ನಿಂತಿರುವ ಹಲವಾರು ಜನಾಂಗಗಳು ಕೊಡಗಿನ ಸಾಂಸ್ಕೃತಿಕ ಲೋಕಕ್ಕೆ ಉತ್ತಮ ಕೊಡುಗೆಗಳನ್ನು ನೀಡಿದ್ದಾರೆ ಎಂದರು.

ರಂಗಭೂಮಿ ಮತ್ತು ಜನಪದ ರಂಗಭೂಮಿ, ಸಿನಿಮಾ ಕೂಡ ಕೊಡಗಿನ ಸಾಂಸ್ಕೃತಿಕ ಲೋಕಕ್ಕೆ ತನ್ನದೇ ಆದ ಕೊಡುಗೆಗಳನ್ನು ನೀಡಿದೆ ಎಂದು ವಿವರಿಸಿದರು.

ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಕೇಶವ ಕಾಮತ್ ಪ್ರಾಸ್ತಾವಿಕವಾಗಿ ಮಾತನಾಡಿ, ‘ವಿದ್ಯಾರ್ಥಿಗಳ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ವಿಷಯಗಳನ್ನು ತಿಳಿಸುವ ಕಾರ್ಯಕ್ರಮಗಳನ್ನು ಸಾಹಿತ್ಯ ಪರಿಷತ್ತು ದತ್ತಿ ಕಾರ್ಯಕ್ರಮಗಳ ಮೂಲಕ ನಿರಂತರವಾಗಿ ನಡೆಸುತ್ತಾ ಬಂದಿದೆ’ ಎಂದರು.

ಗೋಣಿಕೊಪ್ಪಲು ಪ್ರೌಢಶಾಲೆಯ ಆಡಳಿತ ಮಂಡಳಿ ಅಧ್ಯಕ್ಷ ಪಿ.ಕೆ ಚಿಣ್ಣಪ್ಪ ಕಾರ್ಯಕ್ರಮ ಉದ್ಘಾಟಿಸಿದರು. ದತ್ತಿ ದಾನಿಗಳ ಆಶಯದಂತೆ 2024-25 ನೇ ಸಾಲಿನ 10ನೇ ತರಗತಿಯ ಕನ್ನಡ ಮಾಧ್ಯಮ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ಸೋಮವಾರಪೇಟೆ ತಾಲ್ಲೂಕಿನ ನಿಡ್ತ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿನಿ ಜೆ.ಎಸ್.ಪೂರ್ವಿಕಾ ಅವರನ್ನು ಸನ್ಮಾನಿಸಲಾಯಿತು.

ಪ್ರೌಢಶಾಲೆಆಡಳಿತ ಮಂಡಳಿಯ ಕಾರ್ಯದರ್ಶಿ ಕುಪ್ಪಂಡ ಗಣೇಶ ತಿಮ್ಮಯ್ಯ, ಮುಖ್ಯ ಶಿಕ್ಷಕ ಕೃಷ್ಣಚೈತನ್ಯ, ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕುಲ್ಲಚಂಡ ಪ್ರಮೋದ್ ಗಣಪತಿ, ಸದಸ್ಯ ಟಿ.ಆರ್.ವಿನೋದ್ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.