ಭಾನುವಾರ, ಏಪ್ರಿಲ್ 5, 2020
19 °C

ಮತ್ತೆ ಎರಡು ನೆಗೆಟಿವ್‌ ವರದಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಇದುವರೆಗೂ 34 ಗಂಟಲು ದ್ರವ ಹಾಗೂ ರಕ್ತ ಮಾದರಿ ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಅದರಲ್ಲಿ 1 ಪ್ರಕರಣ ದೃಢಪಟ್ಟು 32 ಪ್ರಕರಣಗಳಲ್ಲಿ ನೆಗೆಟಿವ್ ವರದಿ ಬಂದಿದೆ. 1 ಪ್ರಕರಣದಲ್ಲಿ ವರದಿ ನಿರೀಕ್ಷಿಸಲಾಗಿದೆ.

ಜಿಲ್ಲಾ ಆಸ್ಪತ್ರೆಯಲ್ಲಿ ಪ್ರತ್ಯೇಕ ಕೊಠಡಿಯಲ್ಲಿ ಇಟ್ಟು ಉಪಚರಿಸಲಾಗುತ್ತಿದ್ದ 3 ಪ್ರಕರಣಗಳ ಪೈಕಿ, 2 ಪ್ರಕರಣದಲ್ಲಿ ನೆಗೆಟಿವ್ ವೈದ್ಯಕೀಯ ವರದಿ ಬಂದ ಕಾರಣ ಅವರನ್ನು ಜಿಲ್ಲಾ ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿದೆ. ಸೋಂಕು ದೃಢಪಟ್ಟ 1 ಪ್ರಕರಣದ ವ್ಯಕ್ತಿಯನ್ನು ಮಾತ್ರ ಜಿಲ್ಲಾ ಆಸ್ಪತ್ರೆಯಲ್ಲಿ ಪ್ರತ್ಯೇಕ ಕೊಠಡಿಯಲ್ಲಿ ಇಟ್ಟು ಉಪಚರಿಸಲಾಗುತ್ತಿದೆ.

ಎಲ್ಲಾ ಬ್ಯಾಂಕುಗಳ ಎಟಿಎಂಗಳಲ್ಲಿ ಸ್ಯಾನಿಟೈಜರ್ ಇಡಲು ಹಾಗೂ ಎಟಿಎಂಗಳಲ್ಲಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಲು ಎಲ್ಲಾ ಸೂಕ್ತ ಕ್ರಮ ವಹಿಸುವಂತೆ ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್‌ ಕಣ್ಮಣಿ ಜಾಯ್‌ ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)