ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಾಯಿ, ಶಿಶು ಸಾವು: ವೈದ್ಯರ ನಿರ್ಲಕ್ಷ್ಯ ಆರೋಪ

ಗೋಣಿಕೊಪ್ಪಲು ಆಸ್ಪತ್ರೆಯಲ್ಲಿ ಘಟನೆ
Last Updated 16 ಏಪ್ರಿಲ್ 2019, 12:56 IST
ಅಕ್ಷರ ಗಾತ್ರ

ಮಡಿಕೇರಿ: ವಿರಾಜಪೇಟೆ ತಾಲ್ಲೂಕಿನ ಗೋಣಿಕೊಪ್ಪಲು ಆಸ್ಪತ್ರೆಯಲ್ಲಿ ಸೋಮವಾರ ರಾತ್ರಿ ತಾಯಿ, ಶಿಶು ಸತ್ತಿದ್ದು, ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಕುಟುಂಬಸ್ಥರು ಆರೋಪಿಸಿ ಪ್ರತಿಭಟನೆ ನಡೆಸಿದರು.

ಗೋಣಿಕೊಪ್ಪಲು ನಿವಾಸಿ ಯಾಸ್ಮಿನ್‌ ಅವರಿಗೆ ಹೆರಿಗೆ ನೋವು ಕಾಣಿಸಿಕೊಂಡ ಕಾರಣ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆಸ್ಪತ್ರೆಯಲ್ಲಿ ವೈದ್ಯರು ಇರಲಿಲ್ಲ. ಅಲ್ಲಿದ್ದ ನರ್ಸ್‌ ಹೆರಿಗೆ ಮಾಡಿಸಿದ್ದಾರೆ. ಈ ವೇಳೆ ಶಿಶು ಸಹ ಸಾವನ್ನಪ್ಪಿದ್ದು, ಯಾಸ್ಮಿನ್ ಅವರು ರಕ್ತಸ್ರಾವದಿಂದ ಬಳಲುತ್ತಿದ್ದರು.

ತಕ್ಷಣವೇ ಅವರನ್ನು ಮಡಿಕೇರಿ ಜಿಲ್ಲಾ ಆಸ್ಪತ್ರೆಗೆ ಒಯ್ಯಲಾಗಿದ್ದು, ಮಾರ್ಗದಲ್ಲಿ ಮೃತಪಟ್ಟಿದ್ದಾರೆ. ಆಸ್ಪತ್ರೆಯಲ್ಲಿ ಸೂಕ್ತ ಸೌಲಭ್ಯವಿಲ್ಲದೇ ಇರುವುದೇ ಸಾವಿಗೆ ಕಾರಣವೆಂದು ಮೃತರ ಸಂಬಂಧಿಕರು ನೋವು ತೋಡಿಕೊಂಡರು.

ಕರ್ತವ್ಯ ಲೋಪ ಎಸಗುವ ವೈದ್ಯರ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು. ಮುಂದೆ ಇಂತಹ ಘಟನೆಗಳು ನಡೆಯದಂತೆ ಎಚ್ಚರ ವಹಿಸಬೇಕು ಎಂದು ಆಕೆ ಸಂಬಂಧಿಕರು ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT