ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುಂಟಿಕೊಪ್ಪ: ಪಶು ಆಸ್ಪತ್ರೆಯ ನೂತನ ಕಟ್ಟಡ ಉದ್ಘಾಟನೆ

ಸುಂಟಿಕೊಪ್ಪ: ಪಶು ಆಸ್ಪತ್ರೆಯ ನೂತನ ಕಟ್ಟಡ ಉದ್ಘಾಟನೆ
Last Updated 2 ಮಾರ್ಚ್ 2021, 16:00 IST
ಅಕ್ಷರ ಗಾತ್ರ

ಸುಂಟಿಕೊಪ್ಪ: ‘ಸರ್ಕಾರಿ ನೌಕರರಲ್ಲಿ ನಿಸ್ವಾರ್ಥ ಸೇವೆ ಮಾಡುವ ಮನಸ್ಥಿತಿ ಗಟ್ಟಿಯಾಗಿರಬೇಕು’ ಎಂದು ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಹೇಳಿದರು.

ಪಶುಪಾಲನಾ ಮತ್ತು ಪಶುವೈದ್ಯಕೀಯ ಇಲಾಖೆ ವತಿಯಿಂದ ಸುಂಟಿಕೊಪ್ಪದಲ್ಲಿ ನಿರ್ಮಿಸಲಾದ ಪಶು ಆಸ್ಪತ್ರೆಯ ನೂತನ ಕಟ್ಟಡ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ರಾಜ್ಯ ಸರ್ಕಾರದ ನಿಧಿಯಿಂದ ₹29.60 ಲಕ್ಷ ವೆಚ್ಚದಲ್ಲಿ ಈ ಕಟ್ಟಡ ನಿರ್ಮಾಣವಾಗಿದ್ದು, ರೈತರಿಗೆ, ಜಾನುವಾರು ಸಾಕುವವರಿಗೆ ಪ್ರಯೋಜನವಾಗಲಿದೆ. ದನಗಳ ಸಂಖ್ಯೆ ಕಡಿಮೆಯಾಗಿದೆ. ಜನಸಂಖ್ಯೆ ಹೆಚ್ಚಾಗಿದೆ. ಅಧಿಕಾರಿಗಳು ಸಿಬ್ಬಂದಿ ಸಂಖ್ಯೆ ಕಡಿಮೆಯಾಗಿದ್ದರೂ ಶ್ರದ್ಧೆಯಿಂದ ಕೆಲಸ ಮಾಡಬೇಕು ಎಂದು ಕರೆನೀಡಿದರು.

ಜಿ.ಪಂ.ಸದಸ್ಯೆ ಕೆ.ಪಿ.ಚಂದ್ರಕಲಾ ಮಾತನಾಡಿ, ‘ಪಶುವೈದ್ಯಕೀಯ ಕಚೇರಿ ನಿರ್ಮಿಸಿದ್ದರಿಂದ ಪಶುಸ್ನೇಹಿಗಳಿಗೆ ಅನುಕೂಲವಾಗಿದೆ. ಕೇಂದ್ರ ಸರ್ಕಾರ ಪೆಟ್ರೋಲ್, ಡಿಸೇಲ್, ಅಡುಗೆ ಅನಿಲ ಸೇರಿದಂತೆ ನಿತ್ಯೋಪಯೋಗಿ ಬೆಲೆ ಹೆಚ್ಚಿಸಿದ್ದರಿಂದ ಜನಸಾಮಾನ್ಯರಿಗೆ ತೀವ್ರ ತೊಂದರೆಯಾಗಿದೆ. ಬೆಲೆ ಕಡಿಮೆಗೊಳಿಸಲು ಸಂಸದರು, ಶಾಸಕರು ಸರ್ಕಾರದ ಮೇಲೆ ಒತ್ತಡ ತರಬೇಕು. ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು’ ಎಂದು ಹೇಳಿದರು.

ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಸಂಸದ ಪ್ರತಾಪಸಿಂಹ ಅವರು, ‘ಕೊರೊನಾದಿಂದ ದೇಶದ ಆರ್ಥಿಕ ಪರಿಸ್ಥಿತಿ ಕುಂಠಿತವಾಗಿದೆ. ಮುಂದಿನ ದಿನಗಳಲ್ಲಿ ಸುಧಾರಣೆಯಾಗಲಿದೆ. ಗ್ರಾಮ ಪಂಚಾಯಿತಿಗೆ ಜಲ ಮಿಷನ್ ಯೋಜನೆ, ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ, ಉಜ್ವಲ ಯೋಜನೆ, ಸೌಭಾಗ್ಯ ಯೋಜನೆ ಕಿಸಾನ್ ಸಮ್ಮಾನ ಯೋಜನೆಯಿಂದ ಎಲ್ಲಾ ವರ್ಗದವರಿಗೆ ಸರ್ಕಾರ ಯೋಜನೆ ರೂಪಿಸಿದೆ’ ಎಂದು ವಿವರಣೆ ನೀಡಿದರು.

ಜಿ.ಪಂ.ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ಜಿ.ಪಂ.ಸದಸ್ಯ ಪಿ.ಎಂ.ಲತೀಫ್, ತಾ.ಪಂ.ಉಪಾಧ್ಯಕ್ಷ ಅಭಿಮನ್ಯು ಕುಮಾರ್, ಗ್ರಾ.ಪಂ.ಅಧ್ಯಕ್ಷೆ ಶಿವಮ್ಮ, ತಾ.ಪಂ.ಸದಸ್ಯೆ ಓಡಿಯಪ್ಪನ ವಿಮಲಾವತಿ, ಗ್ರಾ.ಪಂ.ಉಪಾಧ್ಯಕ್ಷ ಪ್ರಸಾದ್ ಕುಟ್ಟಪ್ಪ, ಪಿಡಿಒ ವೇಣುಗೋಪಾಲ್, ಕೊಡಗು ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಬಿ.ಬಿ.ಭಾರತೀಶ್, ಡಾ.ಶಶಿಕಾಂತ ರೈ, ಗ್ರಾ.ಪಂ.ಸದಸ್ಯರುಗಳು ಇದ್ದರು.

ಸುಂಟಿಕೊಪ್ಪ ಪಶು ಸಂಗೋಪಾನಾ ಇಲಾಖೆಯ ಕಟ್ಟಡ ನಿರ್ಮಾಣಕ್ಕೆ ಜಾಗ ದಾನವಾಗಿ ನೀಡಿದ ದಿ. ನಿರುವಾಣಿ ಗೌಡ, ದಿ.ಟಿ.ರುದ್ರಪ್ಪ ಅವರ ಪರವಾಗಿ ಪುತ್ರರಾದ ಎನ್.ಆರ್.ನಂಜಪ್ಪ ಹಾಗೂ ಎನ್.ಎಸ್.ದೇವಪ್ಪ ಅವರನ್ನು ಸನ್ಮಾನಿಸಲಾಯಿತು.

ಜಿಲ್ಲಾ ಪಶುಪಾಲನಾ ಇಲಾಖೆ ಸಹಾಯಕ ನಿರ್ದೇಶಕರುಗಳಾದ ಶಿವು, ಬಾದಾಮಿ ಕಾರ್ಯಕ್ರಮ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT