ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಮ್ಮೆಮಾಡು ಉರುಸ್ ನಾಳೆಯಿಂದ

Last Updated 20 ಫೆಬ್ರುವರಿ 2019, 12:32 IST
ಅಕ್ಷರ ಗಾತ್ರ

ಮಡಿಕೇರಿ: ಎಮ್ಮೆಮಾಡಿನ ತಾಜುಲ ಇಸ್ಲಾಂ ಮುಸ್ಲಿಂ ಜಮಾತ್‌ನಿಂದ ಫೆ. 22ರಿಂದ ಮಾರ್ಚ್‌ 1ರ ತನಕ ‘ಎಮ್ಮೆಮಾಡು ಮುಖಾಂ ಉರುಸ್’ ನಡೆಯಲಿದೆ ಎಂದು ಜಮಾತ್‌ನ ಪ್ರಧಾನ ಕಾರ್ಯದರ್ಶಿ ಕೆ.ಎಂ. ಹುಸೈನ್ ಸಖಾಫಿ ತಿಳಿಸಿದರು.

ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಹಝ್ರತ್ ಸೂಫಿ ಶಹೀದ್ ಮತ್ತು ಸೈಯದ್‌ ಹಸನ್ ಅಲ್ ಹಳ್ರಮೀ ಹೆಸರಿನಲ್ಲಿ ಪ್ರತಿವರ್ಷ ಉರುಸ್ ಆಚರಿಸಿಕೊಂಡು ಬರಲಾಗುತ್ತಿದೆ. 8 ದಿನಗಳ ಕಾಲ ನಡೆಯುವ ಈ ಕಾರ್ಯಕ್ರಮದ ಸಂದರ್ಭದಲ್ಲಿ ಸಾಮೂಹಿಕ ವಿವಾಹ, ದಾರ್ಮಿಕ ಪ್ರವಚನಗಳು ನಡೆಯಲಿವೆ ಎಂದು ತಿಳಿಸಿದರು.

ಎರಡು ಜೋಡಿಗಳಿಗೆ ವಿವಾಹ ಸಮಾರಂಭ ನಡೆಯಲಿದೆ. 25ರಂದು ಮಧ್ಯಾಹ್ನ 12ಕ್ಕೆ ಸಾರ್ವಜನಿಕ ಸಮ್ಮೇಳನ ನಡೆಯಲಿದ್ದು, ಸಮ್ಮೇಳನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ.ಮಹೇಶ್, ವಸತಿ ಸಚಿವ ಯು.ಟಿ.ಖಾದರ್, ಶಾಸಕ ಕೆ.ಜಿ.ಬೋಪಯ್ಯ ಪಾಲ್ಗೊಳ್ಳುವರು ಎಂದು ಹೇಳಿದರು.

ಮಾರ್ಚ್‌ 1ರಂದು ಸಮಾರೋಪ ಸಮಾರಂಭ ನಡೆಯಲಿದ್ದು, ಪಿ.ಎಂ.ಅಬ್ಬಾಸ್ ಉಸ್ತಾದ್, ಬೇಕಲ್ ಇಬ್ರಾಹಿಂ ಮುಸ್ಲಿಯಾರ್, ಎ.ಪಿ.ಅಬೂಬಕರ್ ಮುಸ್ಲಿಯಾರ್ ಪಾಲ್ಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಜಮಾತ್‌ನ ಅಧ್ಯಕ್ಷ ಉಸ್ಮಾನ್ ಹಾಜಿ, ಸದಸ್ಯ ಸಿ.ಎಂ.ಸದರಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT