ಪರೀಕ್ಷೆಯಲ್ಲಿ ಅನುತ್ತೀರ್ಣದ ಭಯ: ವಿದ್ಯಾರ್ಥಿನಿ ಆತ್ಮಹತ್ಯೆ

ಮಂಗಳವಾರ, ಮಾರ್ಚ್ 19, 2019
20 °C

ಪರೀಕ್ಷೆಯಲ್ಲಿ ಅನುತ್ತೀರ್ಣದ ಭಯ: ವಿದ್ಯಾರ್ಥಿನಿ ಆತ್ಮಹತ್ಯೆ

Published:
Updated:

ಮಡಿಕೇರಿ: ಪರೀಕ್ಷೆಯಲ್ಲಿ ಅನುತ್ತೀರ್ಣ ಆಗುವ ಭಯದಿಂದ ಮರಗೋಡು ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ತಾಲ್ಲೂಕಿನ ಹೊಸಕೇರಿ ಗ್ರಾಮದ ಎಂ.ಸಿ.ಜಸ್ಮಿತಾ (14) ಆತ್ಮಹತ್ಯೆ ಮಾಡಿಕೊಂಡವರು. ಸೋಮವಾರ ಗಣಿತ ವಿಷಯದ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿ, ಮನೆಯ ಸಮೀಪದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಮಗಳು ರಾತ್ರಿಯಾದರೂ ಮನೆಗೆ ಬಾರದಿದ್ದ ಕಾರಣ ಆತಂಕಗೊಂಡ ಪೋಷಕರು ಮಗಳಿಗಾಗಿ ಹುಡುಕಾಟ ನಡೆಸಿದರು. ಮಂಗಳವಾರ ಬೆಳಿಗ್ಗೆ ಕೆರೆಯಲ್ಲಿ ವಿದ್ಯಾರ್ಥಿನಿಯ ಮೃತದೇಹ ಪತ್ತೆಯಾಗಿದೆ.

ಡೆತ್‌ನೋಟ್‌ನಲ್ಲಿ ಏನಿದೆ?: ‘ಅಪ್ಪ–ಅಮ್ಮ ನೀವು ನನ್ನನ್ನು ಚೆನ್ನಾಗಿ ಓದಿಸಬೇಕು ಅಂತ ಆಸೆ ಇಟ್ಟುಕೊಂಡಿದ್ದೀರಿ. ಆದರೆ, ನನಗೆ ಓದಲು ಸಾಧ್ಯವಾಗಲಿಲ್ಲ. 9ನೇ ತರಗತಿ ಪಾಸ್‌ ಆಗುವುದಿಲ್ಲ. ಮರ್ಯಾದೆ ಹೋಗಿದೆ. ಆದ್ದರಿಂದ ಎಲ್ಲಾದರೂ ಹೋಗಬೇಕು ಎಂದು ನಿರ್ಧರಿಸಿದ್ದೇನೆ...’ ಎಂದು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 3

  Sad
 • 0

  Frustrated
 • 0

  Angry

Comments:

0 comments

Write the first review for this !