ಶುಕ್ರವಾರ, ಸೆಪ್ಟೆಂಬರ್ 17, 2021
29 °C

3ರಿಂದ ಜೈ ಜವಾನ್ ಟ್ರೋಫಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಡಿಕೇರಿ: ಜಿಲ್ಲಾ ಮೊಗೇರ ಸೇವಾ ಸಮಾಜದ ವತಿಯಿಂದ ಮೇ 3ರಿಂದ 5ರವರೆಗೆ ನಗರದ ಜನರಲ್‌ ತಿಮ್ಮಯ್ಯ ಕ್ರಿಡಾಂಗಣದಲ್ಲಿ ರಾಜ್ಯಮಟ್ಟದ ‘ಜೈ ಜವಾನ್ ಟ್ರೋಫಿ’ ಕ್ರಿಕೆಟ್ ಹಾಗೂ ಥ್ರೋಬಾಲ್ ಟೂರ್ನಿ ನಡೆಯಲಿದೆ ಎಂದು ಜಿಲ್ಲಾ ಮೊಗೇರ ಸೇವಾ ಸಮಾಜದ ಗೌರವಾಧ್ಯಕ್ಷ ಪಿ.ಎಂ. ರವಿ ತಿಳಿಸಿದರು.

ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಜನಾಂಗ ಬಾಂಧವರನ್ನು ಸಂಘಟನೆ ಮಾಡುವ ದೃಷ್ಟಿಯಿಂದ ಪ್ರತಿವರ್ಷವೂ ಕ್ರೀಡಾಕೂಟ ನಡೆಸಿಕೊಂಡು ಬರಲಾಗುತ್ತಿದ್ದು, ಕ್ರಿಕೆಟ್ ಟೂರ್ನಿಯ ವಿಜೇತ ₹ 20 ಸಾವಿರ ಹಾಗೂ ದ್ವೀತಿಯ ತಂಡಕ್ಕೆ ₹ 10 ಸಾವಿರ ಹಾಗೂ ಆಕರ್ಷಕ ಬಹುಮಾನ ನೀಡಲಾಗುವುದು ಎಂದು ತಿಳಿಸಿದರು.

ತಂಡದಲ್ಲಿ 11+1 ಆಟಗಾರರು ಕಡ್ಡಾಯ, ಕ್ರಿಕೆಟ್ 6 ಓವರ್‌ಗಳಿಗೆ ಸೀಮಿತವಾಗಿದೆ ಎಂದು ತಿಳಿಸಿದರು.

ಕ್ರೀಡಾಕೂಟದಲ್ಲಿ ಗ್ರಾಮೀಣ ಕ್ರೀಡೆಗಳಾದ ಹಗ್ಗಜಗ್ಗಾಟ, ಕಾಳು ಹೆಕ್ಕುವುದು, ಓಟ, ನಿಂಬೆ ಓಟದ ಸ್ಪರ್ಧೆಗಳನ್ನು  ಆಯೋಜಿಸಲಾಗಿದೆ. ಮಾಹಿತಿಗೆ ಮೊಬೈಲ್‌: 94834 87528, 99640 60716 ಸಂಪರ್ಕಿಸಬಹುದು ಎಂದು ರವಿ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಮೊಗೇರ ಸೇವಾ ಸಮಾಜದ ಪ್ರಧಾನ ಕಾರ್ಯದರ್ಶಿ ಎಂ.ಜಿ. ಚಂದ್ರ, ಮಡಿಕೇರಿ ತಾಲ್ಲೂಕು ಅಧ್ಯಕ್ಷ ಪಿ.ಬಿ. ಸುರೇಶ್, ಖಜಾಂಜಿ ವಿವೇಕ್, ಮೊಗೇರ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ಪಿ.ಸಿ. ರಮೇಶ್ ಉಪಸ್ಥಿತರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.