ಶುಕ್ರವಾರ, ಸೆಪ್ಟೆಂಬರ್ 24, 2021
23 °C
ಸಂಬಂಧಿಕರೊಬ್ಬರ ನಿಶ್ಚಿತಾರ್ಥದ ವೇಳೆ ಘಟನೆ, ನಟ ಭುವನ್‌ ಮೇಲೂ ಹಲ್ಲೆ

ರೆಸಾರ್ಟ್‌ನಲ್ಲಿ ನಟಿ ಹರ್ಷಿಕಾ ಪೂಣಚ್ಚಗೆ ಕಿರುಕುಳ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಡಿಕೇರಿ: ಚಿತ್ರನಟಿ ಹರ್ಷಿಕಾ ಪೂಣಚ್ಚ ಜತೆಗೆ ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ಬನ್ಸಿ ನಾಣಯ್ಯ ಎಂಬಾತನನ್ನು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

ಮತ್ತೊಬ್ಬ ಆರೋಪಿ ಬಿಪಿನ್‌ ದೇವಯ್ಯ ತಲೆಮರೆಸಿಕೊಂಡಿದ್ದಾನೆ.

ತಾಲ್ಲೂಕಿನ ನೀರುಕೊಲ್ಲಿಯ ರೆಸಾರ್ಟ್‌ನಲ್ಲಿ ಗುರುವಾರ ರಾತ್ರಿ ನಡೆದ ಸಂಬಂಧಿಯೊಬ್ಬರ ನಿಶ್ಚಿತಾರ್ಥದಲ್ಲಿ ಪಾಲ್ಗೊಳ್ಳಲು ನಟ ಭುವನ್‌ ಜತೆಯಲ್ಲಿ ಹರ್ಷಿಕಾ ಬಂದಿದ್ದರು. ಆಗ ಈ ಆರೋಪಿಗಳಿಬ್ಬರೂ ಹರ್ಷಿಕಾಗೆ ಕಿರುಕುಳ ನೀಡಿದ್ದಾರೆ ಎನ್ನಲಾಗಿದೆ.

ಅದನ್ನು ಪ್ರಶ್ನಿಸಿದ್ದ ಭುವನ್‌ ಮೇಲೆಯೂ ಹಲ್ಲೆ ನಡೆಸಲಾಗಿದೆ. ಗಾಯಗೊಂಡಿದ್ದ ಭುವನ್‌ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಹರ್ಷಿಕಾ ಪೂಣಚ್ಚ ಅವರೊಂದಿಗೆ ಬೆಂಗಳೂರಿಗೆ ತೆರಳಿದ್ದಾರೆ. 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು