ಬೇತು ಗ್ರಾಮದಲ್ಲಿ ವಿಜೃಂಭಣೆಯಿಂದ ನಡೆದ ಕೋಲಗಳು;ಮಕ್ಕಿ ಶಾಸ್ತಾವು ಉತ್ಸವಕ್ಕೆ ತೆರೆ

ಸೋಮವಾರ, ಮೇ 20, 2019
30 °C

ಬೇತು ಗ್ರಾಮದಲ್ಲಿ ವಿಜೃಂಭಣೆಯಿಂದ ನಡೆದ ಕೋಲಗಳು;ಮಕ್ಕಿ ಶಾಸ್ತಾವು ಉತ್ಸವಕ್ಕೆ ತೆರೆ

Published:
Updated:
Prajavani

ನಾಪೋಕ್ಲು: ಸಮೀಪದ ಬೇತು ಗ್ರಾಮದ ಮಕ್ಕಿ ಶಾಸ್ತಾವು ದೇವರ ವಾರ್ಷಿಕ ಉತ್ಸವ ಎರಡು ದಿನಗಳ ಕಾಲ ಅತ್ಯಂತ ವಿಜೃಂಭಣೆಯಿಂದ ನೆರವೇರಿತು.

ಶನಿವಾರ ದೇವಾಲಯದ ಆವರಣದಲ್ಲಿ ನಡೆದ ಎರಡು ಪ್ರಮುಖ ಕೋಲಗಳೊಂದಿಗೆ ಉತ್ಸವ ಕೊನೆಗೊಂಡಿತು. ಮಕ್ಕಿ ಶಾಸ್ತಾವು ಸನ್ನಿಧಿಯಲ್ಲಿ ಶನಿವಾರ ಬೆಳಗ್ಗಿನಿಂದಲೇ ವಿವಿಧ ಕೋಲಗಳ ಶಾಸ್ತಾವು ದೇವರಿಗೆ ಸೇವೆ ಸಲ್ಲಿಸಿದವು. ಬೆಳಿಗ್ಗೆ ಅಜ್ಜಪ್ಪ ಕೋಲ ಹಾಗೂ ಮಧ್ಯಾಹ್ನ ವಿಷ್ಣುಮೂರ್ತಿ ಕೋಲಗಳು ತಮ್ಮ ಸಾಂಪ್ರದಾಯಿಕ ವೇಷಭೂಷಣಗಳೊಂದಿಗೆ ಗಮನ ಸೆಳೆದವು.

ಭಕ್ತರು ಅಧಿಕ ಸಂಖ್ಯೆಯಲ್ಲಿ ಉತ್ಸವದಲ್ಲಿ ಪಾಲ್ಗೊಂಡು ಕಾರ್ಯಕ್ರಮ ವೀಕ್ಷಿಸಿದರು. ಭಕ್ತರಿಂದ ದೇವರಿಗೆ ವಿವಿಧ ರೀತಿಯ ಹರಕೆಗಳನ್ನು ಸಲ್ಲಿಸಲಾಯಿತು. ದೇವಾಲಯದ ವತಿಯಿಂದ ಉತ್ಸವ ವೀಕ್ಷಿಸಲು ಬಂದ ಭಕ್ತರಿಗೆ ಅನ್ನದಾನ ಏರ್ಪಡಿಸಲಾಗಿತ್ತು. ಮಧ್ಯಾಹ್ನ ಜರುಗಿದ ವಿಷ್ಣುಮೂರ್ತಿ ಕೋಲವನ್ನು ಭಕ್ತರು ವೀಕ್ಷಿಸಿದರು. ಉತ್ಸವದ ಅಂಗವಾಗಿ ಶುಕ್ರವಾರ ಮಧ್ಯಾಹ್ನ ಎತ್ತೇರಾಟ ಹಾಗೂ ರಾತ್ರಿ ದೀಪಾರಾಧನೆ ನಡೆಯಿತು.

ತಡರಾತ್ರಿಯವರೆಗೆ ದೇವಾಲಯದಲ್ಲಿ ಕೇರಳದ ಚಂಡೆವಾದ್ಯದೊಂದಿಗೆ ದೀಪಾರಾಧನೆ ನಡೆಯಿತು. ಬೇತು, ಕೈಕಾಡು, ನಾಪೋಕ್ಲು, ಪಾರಾಣೆ, ಕೊಳಕೇರಿ ಮತ್ತಿತರ ಭಾಗಗಳಿಂದ ಉತ್ಸವದ ವೀಕ್ಷಣೆಗೆ ಬಂದಿದ್ದ ಭಕ್ತರು ಭಕ್ತಿಭಾವದಿಂದ ಹರಕೆ ಸಲ್ಲಿಸಿದರು. ವಿವಿಧ ಕೋಲಗಳನ್ನು ಕುತೂಹದಿಂದ ವೀಕ್ಷಿಸಿದರು. ಸಂಜೆ ಬೆಳ್ಳಿಯ ಮುಖವಾಡ ಹೊತ್ತು ಶಾಸ್ತಾವು ದೇವಾಲಯದಲ್ಲಿ ವಿಷ್ಣುಮೂರ್ತಿ ಕೋಲದ ಪ್ರದಕ್ಷಿಣೆ ನಡೆಯಿತು. ದೇವಾಲಯದ ಆಡಳಿತ ಮಂಡಳಿ ಅಧ್ಯಕ್ಷ ಕುಟ್ಟಂಚೆಟ್ಟೀರ ಶ್ಯಾಂ ಬೋಪಣ್ಣ, ತಕ್ಕಮುಖ್ಯಸ್ಥ ಕೊಂಡೀರ ಪೊನ್ನಣ್ಣ ವಾರ್ಷಿಕ ಉತ್ಸವದ ನೇತೃತ್ವ ವಹಿಸಿದ್ದರು. ಅರ್ಚಕ ಮಕ್ಕಿ ದಿವಾಕರ ಪೂಜಾ ವಿಧಿವಿಧಾನಗಳನ್ನು ನೆರವೆರಿಸಿದರು.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !