14ರಂದು ದಿಡ್ಡಳ್ಳಿಯಲ್ಲಿ ಕಾಯಕ ದಿನಾಚರಣೆ

ಸೋಮವಾರ, ಮೇ 27, 2019
27 °C
ನಿರಾಶ್ರಿತ ಕೇಂದ್ರದ ಸುತ್ತಗಿಡ ನೆಡುವ ಕಾರ್ಯಕ್ರಮ

14ರಂದು ದಿಡ್ಡಳ್ಳಿಯಲ್ಲಿ ಕಾಯಕ ದಿನಾಚರಣೆ

Published:
Updated:

ಮಡಿಕೇರಿ: ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು, ಕದಳಿ ಮಹಿಳಾ ವೇದಿಕೆ ಹಾಗೂ ರೋಟರಿ ಸೋಮವಾರಪೇಟೆ ಹಿಲ್ಸ್, ಮೈಸೂರು ಜೆಎಸ್‌ಎಸ್ ಆಸ್ಪತ್ರೆ ಆಶ್ರಯದಲ್ಲಿ ಮೇ 14ರಂದು ಕೂಡಿಗೆ ಸಮೀಪದ ದಿಡ್ಡಳ್ಳಿ ನಿರಾಶ್ರಿತರ ಕೇಂದ್ರದಲ್ಲಿ ಕಾಯಕ ದಿನಾಚರಣೆ ಹಮ್ಮಿಕೊಳ್ಳಲಾಗಿದೆ ಎಂದು ಶರಣ ಸಾಹಿತ್ಯ ಪರಿಷತ್ ಜಿಲ್ಲಾ ಅಧ್ಯಕ್ಷ ಎಸ್.ಮಹೇಶ್ ತಿಳಿಸಿದರು.

ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಅಂದು ದಿಡ್ಡಳ್ಳಿ ನಿರಾಶ್ರಿತರಿಗೆ ಆರೋಗ್ಯ ತಪಾಸಣಾ ಶಿಬಿರ ನಡೆಯಲಿದೆ ಎಂದು ಹೇಳಿದರು.

ಬೆಳಿಗ್ಗೆ 10ಕ್ಕೆ ಅರಣ್ಯ ಇಲಾಖೆ ವತಿಯಿಂದ ದಿಡ್ಡಳ್ಳಿ ನಿರಾಶ್ರಿತ ಕೇಂದ್ರದ ಸುತ್ತ ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ವಲಯ ಅರಣ್ಯಾಧಿಕಾರಿ ಲಕ್ಷ್ಮಿಕಾಂತ್ ಚಾಲನೆ ನೀಡಲಿದ್ದಾರೆ. ಆರೋಗ್ಯ ತಪಾಸಣಾ ಶಿಬಿರದಲ್ಲಿ ಹೃದ್ರೋಗ, ಸ್ತ್ರೀರೋಗ, ಚರ್ಮರೋಗ ಮತ್ತಿತರ ತಪಾಸಣೆಗಳು ನಡೆಯಲಿದೆ. ತಪಾಸಣೆಗಾಗಿ ಜೆಎಸ್‌ಎಸ್ ನುರಿತ ವೈದ್ಯರ ತಂಡ ಪಾಲ್ಗೊಳ್ಳಲಿದೆ ಎಂದು ಮಾಹಿತಿ ನೀಡಿದರು.

ಬೆಳಿಗ್ಗೆ 11ಕ್ಕೆ ಕಾಯಕ ದಿನಾಚರಣೆ ಉದ್ಘಾಟನಾ ಸಮಾರಂಭದಲ್ಲಿ ವಿರಾಜಪೇಟೆ ಅರಮೇರಿ ಕಳಂಚೇರಿ ಮಠಾಧೀಶ ಶಾಂತಮಲ್ಲಿಕಾರ್ಜುನ ಸ್ವಾಮೀಜಿ, ಕೊಡ್ಲಿಪೇಟೆ ಕಿರಿಕೊಡ್ಲಿ ಮಠದ ಸದಾಶಿವ ಸ್ವಾಮೀಜಿ, ಕಲ್ಲು ಮಠದ ಮಹಾಂತ ಸ್ವಾಮೀಜಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಸಿಇಒ ಲಕ್ಷ್ಮಿಪ್ರಿಯಾ, ಹೆಚ್ಚುವರಿ ಜಿಲ್ಲಾಧಿಕಾರಿ ಶಿವರಾಜು ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಸೋಮವಾರಪೇಟೆ ತಾಲ್ಲೂಕು ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹಾದೇವಪ್ಪ, ಸಲಹೆಗಾರ ಶಿವಪ್ಪ, ಕಾರ್ಯದರ್ಶಿ ಉದಯ್ ಕುಮಾರ್, ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಶಾಂಬಶಿವಮೂರ್ತಿ ಉಪಸ್ಥಿತರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !