ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎನ್‌ಸಿಸಿ ವಿದ್ಯಾರ್ಥಿಗಳ ಸೇವೆ ಸ್ಮರಣೀಯ: ರಾಜೀವ್ ಛೋಪ್ರ

ನವೀಕರಣ ಕಟ್ಟಡ ಉದ್ಘಾಟನಾ ಸಮಾರಂಭ
Last Updated 16 ಮೇ 2019, 13:23 IST
ಅಕ್ಷರ ಗಾತ್ರ

ಮಡಿಕೇರಿ: ಕೊಡಗಿನಲ್ಲಿ ಪ್ರಾಕೃತಿಕ ವಿಕೋಪದ ಸಂದರ್ಭದಲ್ಲಿ ಎನ್‌ಸಿಸಿ ಕೆಡೆಟ್‌ಗಳು ನೀಡಿದ್ದ ಸೇವೆ ಮರೆಯುವಂತಿಲ್ಲ ಎಂದು ಎನ್‌ಸಿಸಿ ಡೈರೆಕ್ಟರ್ ಜನರಲ್ ರಾಜೀವ್ ಛೋಪ್ರ ಹೇಳಿದರು.

ನಗರದ ಜಿಲ್ಲಾ ಎಸ್‌ಪಿ ಕಚೇರಿ ಬಳಿ 19ನೇ ಕರ್ನಾಟಕ ಬೆಟಾಲಿಯನ್ ನವೀಕರಣಗೊಂಡ ಎನ್‌ಸಿಸಿ ಕಟ್ಟಡಕ್ಕೆ ಗುರುವಾರ ಚಾಲನೆ ನೀಡಿ ಅವರು ಮಾತನಾಡಿದರು.

ಭಾರತೀಯ ಸೇನೆಯಲ್ಲಿ ಕೊಡಗಿನ ಸೇನಾನಿಗಳು ಪ್ರಮುಖ ಹುದ್ದೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಕೊಡಗಿನ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ, ಜನರಲ್ ಕೆ.ಎಸ್.ತಿಮ್ಮಯ್ಯ ಅವರ ಸೇವೆ ಅವಿಸ್ಮರಣೀಯವಾಗಿದೆ. ಅವರ ದೇಶ ಸೇವೆಯು ಸೇನೆಗೆ ಸೇರುವವರಿಗೆ ಮಾದರಿ ಎಂದು ಹೇಳಿದರು.

ಕೊಡಗಿನಲ್ಲಿ ಅತಿವೃಷ್ಟಿ ಸಂಭವಿಸಿದ ಸಂದರ್ಭ ಎನ್‌ಸಿಸಿ ಕೆಡೆಟ್‌ಗಳು ಸಾರ್ವಜನಿಕರ ಸೇವೆಗೆ ಅಗತ್ಯವಾಗಿ ಶ್ರಮಿಸಿದ್ದು, ಇವರ ಸೇವೆ ಪ್ರಶಂಸನೀಯ ಎಂದು ಸ್ಮರಿಸಿದರು.

ನವೀಕರಣಗೊಂಡಿರುವ ನೂತನ ಕಟ್ಟಡ ನಿರ್ಮಾಣಕ್ಕೆ ಸಹಕರಿಸಿದ ರಾಜ್ಯ ಸರ್ಕಾರ ಹಾಗೂ ಲೋಕೋಪಯೋಗಿ ಇಲಾಖೆ ಸೇವೆಯನ್ನು ಅಭಿನಂದಿಸಿದರು.

ನೂತನ ಕಟ್ಟಡವು ಎನ್‌ಸಿಸಿ ಕೆಡೆಟ್‌ಗಳಿಗೆ ಹೆಚ್ಚಿನ ಅನುಕೂಲವಾಗಲಿದ್ದು, ಉತ್ತಮ ತರಬೇತಿ ನೀಡಲು ಸಹಕಾರಿಯಾಗಿದೆ. ಕಟ್ಟಡ ಉತ್ತಮ ರೀತಿಯಲ್ಲಿ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ರಾಜೀವ್ ಛೋಪ್ರ ಕರೆ ನೀಡಿದರು.

ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಎನ್‌ಸಿಸಿ ಅಧಿಕಾರಿ ಮೇಜರ್ ಡಾ.ಬಿ. ರಾಘವ್ ಮಾತನಾಡಿ, 1954ರಿಂದ ಮಡಿಕೇರಿಯಲ್ಲಿನ ಎನ್‌ಸಿಸಿ ಹಳೇ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಕಳೆದ ವರ್ಷ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಾನಿಗೊಂಡಿದ್ದು, ಕರ್ನಾಟಕ, ಗೋವಾ ಡೈರೆಕ್ಟರೇಟ್‌ನ ಡೆಪ್ಯೂಟಿ ಡೈರೆಕ್ಟರ್ ಜನರಲ್ ಹಾಗೂ ಮಡಿಕೇರಿಯ ಕಮಾಂಡಿಂಗ್ ಆಫೀಸರ್ ಅವರ ಸಹಕಾರದಿಂದ ಕಟ್ಟಡ ರೂಪುಗೊಂಡಿದ್ದು ಸಂತಸ ತಂದಿದೆ ಎಂದರು.

ನಗರದ 19ನೇ ಕರ್ನಾಟಕ ಬೆಟಾಲಿಯನ್‌ನ ಕಮಾಂಡಿಂಗ್ ಆಫೀಸರ್ ಕರ್ನಲ್ ವಿ.ಎಂ. ನಾಯಕ್, ಮಂಗಳೂರಿನ ಗ್ರೂಪ್ ಕಮಾಂಡರ್ ಕರ್ನಲ್ ಅನಿಲ್ ನಾಟಿಯಾಲ್, ಬ್ರಿಗೇಡಿಯರ್ ಪೂರ್ವಿನಾಥ್, ಎನ್‌ಸಿಸಿ ಅಧಿಕಾರಿ ನ್ಯಾನ್ಸಿ ಶೀಲಾ ಎನ್‌ಸಿಸಿ ಕೆಡೆಟ್‌ಗಳು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT