ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಲ್ತರೆಶೆಟ್ಟಳ್ಳಿ ಜನರಿಗೆ ಪಂಚಾಯಿತಿಯಿಂದ ಶುದ್ಧ ನೀರು ಪೂರೈಕೆ

ವರದಿ ಫಲಶ್ರುತಿ
Last Updated 20 ಮೇ 2019, 13:16 IST
ಅಕ್ಷರ ಗಾತ್ರ

ಸೋಮವಾರಪೇಟೆ: ಹಲವು ವರ್ಷಗಳಿಂದ ಬೇಸಿಗೆಯಲ್ಲಿ ಶುದ್ಧ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ತಾಲ್ಲೂಕಿನ ತಲ್ತರೆಶೆಟ್ಟಳ್ಳಿ ಗ್ರಾಮದ ಹಳೆಊರು ಜನರಿಗೆ ಶಾಂತಳ್ಳಿ ಗ್ರಾಮ ಪಂಚಾಯಿತಿ ವತಿಯಿಂದ ಕುಡಿಯುವ ನೀರು ಸರಬರಾಜು ಮಾಡಲು ಪ್ರಾರಂಭಿಸಲಾಗಿದೆ.

ಏಳೆಂಟು ಕುಟುಂಬಗಳಿದ್ದು, ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಂಡಿರುವ ಬಗ್ಗೆ ವರದಿಯಾದ ಬೆನ್ನಲ್ಲೇ ಪಂಚಾಯಿತಿ ಅಡಳಿತ ಇತ್ತ ಗಮನಹರಿಸಿದೆ.

ನೀರು ಲಭ್ಯವಿರುವ ಕೊಳವೆಬಾವಿಗಳಿಂದ ನೀರು ಸಂಗ್ರಹಿಸಿ ಡ್ರಂ ಮೂಲಕ ಗ್ರಾಮಸ್ಥರಿಗೆ ಕುಡಿಯುವ ನೀರು ಒದಗಿಸುವ ಕಾರ್ಯ ನಡೆಯುತ್ತಿದ್ದು, ಎರಡು ದಿನಗಳಿಗೊಮ್ಮೆ ಅಗತ್ಯವಿರುವಷ್ಟು ಕುಡಿಯುವ ನೀರನ್ನು ಒದಗಿಸಲಾಗುವುದು ಎಂದು ಶಾಂತಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಬಗ್ಗನ ಅನಿಲ್ ತಿಳಿಸಿದರು.

ಈ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ಶಾಶ್ವತವಾಗಿ ಬಗೆಹರಿಸಲು ಕೊಳವೆಬಾವಿ ಕೊರೆಸಬೇಕಾದ ಅಗತ್ಯವಿದ್ದು, ಜಿಲ್ಲಾ ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿಗೆ ಮನವಿ ಮಾಡಲಾಗಿದೆ. ಅನುಮೋದನೆ ದೊರೆತ ತಕ್ಷಣ ಕೊರೆಸುವ ಮೂಲಕ ಶಾಶ್ವತ ಪರಿಹಾರ ನೀಡಲಾಗುವುದು. ಸದ್ಯದ ಮಟ್ಟಿಗೆ ಕುಡಿಯುವ ನೀರಿಗೆ ಸಮಸ್ಯೆ ಆಗದಂತೆ ಸೂಕ್ತ ಕ್ರಮ ವಹಿಸಲಾಗಿದೆ ಎಂದು ತಿಳಿಸಿದ್ದಾರೆ.

ಸದಾ ಹಸಿರಿನಿಂದ ಕೂಡಿದ್ದು, ಅತೀ ಹೆಚ್ಚು ಮಳೆ ಬೀಳುವ ಪಶ್ಚಿಮಘಟ್ಟ ಪ್ರದೇಶದ ಪುಷ್ಪಗಿರಿ ಸೇರಿದಂತೆ ಇನ್ನಿತರ ಬೆಟ್ಟಶ್ರೇಣಿಗೆ ಹೊಂದಿಕೊಂಡಂತಿರುವ, ಶಾಂತಳ್ಳಿ ಹೋಬಳಿ ವ್ಯಾಪ್ತಿಯಲ್ಲೇ ಈ ಬಾರಿ ಕುಡಿಯುವ ನೀರಿಗೆ ತೀವ್ರ ಸಂಕಷ್ಟ ಎದುರಾಗಿದೆ. ಈ ಹಿಂದಿನ ಯಾವುದೇ ವರ್ಷದಲ್ಲೂ ಈ ಭಾಗದಲ್ಲಿ ನೀರಿನ ಸಮಸ್ಯೆ ಎದುರಾಗಿರಲಿಲ್ಲ ಎಂದು ವ್ಯಾಪ್ತಿಯ ಹಲವರು ಆಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT