‘ನಿಫಾ’: ಕೊಡಗಿನ ಗಡಿಭಾಗದಲ್ಲಿ ಕಟ್ಟೆಚ್ಚರ

ಮಂಗಳವಾರ, ಜೂನ್ 18, 2019
23 °C
ಜಾಗೃತಿ ಮೂಡಿಸುತ್ತಿರುವ ಆರೋಗ್ಯ ಇಲಾಖೆ, ಮುನ್ನೆಚ್ಚರಿಕಾ ಕ್ರಮ

‘ನಿಫಾ’: ಕೊಡಗಿನ ಗಡಿಭಾಗದಲ್ಲಿ ಕಟ್ಟೆಚ್ಚರ

Published:
Updated:
Prajavani

ಮಡಿಕೇರಿ: ‘ನಿಫಾ’ ವೈರಸ್ ಕೊಡಗು ಜಿಲ್ಲೆಯಲ್ಲಿ ಹರಡದಂತೆ ತಡೆಗಟ್ಟಲು ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ. ಮೋಹನ್ ಅವರು ತಿಳಿಸಿದರು.

ನಗರದ ಡಿಎಚ್‌ಒ ಕಚೇರಿಯಲ್ಲಿ ಬುಧವಾರ ‘ನಿಫಾ’ ವೈರಸ್ ಜಾಗೃತಿ ಸಭೆಯಲ್ಲಿ ಮಾತನಾಡಿದ ಅವರು, ‘ನಿಫಾ’ ವೈರಸ್ ಬಗ್ಗೆ ಜಿಲ್ಲೆಯಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಆಶಾ ಕಾರ್ಯಕರ್ತೆಯರಿಗೆ, ಅಂಗನವಾಡಿ ಕಾರ್ಯಕರ್ತೆಯರು ಎಲ್ಲಾ ವೈದ್ಯಾಧಿಕಾರಿಗಳು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.

ಕರ್ನಾಟಕದ ಎಂಟು ಜಿಲ್ಲೆಗಳಲ್ಲಿ ಈಗಾಗಲೇ ನಿಫಾ ವೈರಸ್ ಹರಡದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಸರ್ಕಾರ ಸೂಚಿಸಿದೆ. ಜಿಲ್ಲೆಯಲ್ಲೂ ಕೂಡ ಆದ್ಯತಾ ಪಟ್ಟಿಯಲ್ಲಿರುವುದರಿಂದ ನಿಫಾ ವೈರಸ್ ಹರಡದಂತೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಇಂದಿನಿಂದ ಕಾರ್ಯಾಗಾರ:
ಎಲ್ಲಾ ತಾಲ್ಲೂಕು ಆರೋಗ್ಯ ಕೇಂದ್ರಗಳು, ಸಮುದಾಯ ಆರೋಗ್ಯ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಜೂನ್ 7ರಿಂದ 10ರವರೆಗೆ ‘ನಿಫಾ’ ವೈರಸ್ ಹರಡದಂತೆ ಮುನ್ನೆಚ್ಚರಿಕೆ ವಹಿಸುವ ಸಂಬಂಧ ವೈದ್ಯರಿಗೆ, ಶುಶ್ರೂಷಕರಿಗೆ, ಆಶಾ ಕಾರ್ಯಕರ್ತೆಯರಿಗೆ ಅರಿವು ಮೂಡಿಸುವ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ನಿಫಾ ವೈರಸ್ ಕಂಡುಬಂದ ಸಂದರ್ಭದಲ್ಲಿ ರೋಗಿಗಳಿಗೆ ಉಪಚರಿಸಲು ಎಲ್ಲಾ ತಾಲ್ಲೂಕು ಆಸ್ಪತ್ರೆಗಳಲ್ಲಿ ಎರಡು ಹಾಸಿಗೆಯ ವಿಶೇಷ ತುರ್ತು ಚಿಕಿತ್ಸಾ ನಿಗಾ ಘಟಕ ತೆರೆಯಲು ಸೂಚಿಸಲಾಗಿದೆ ಎಂದರು.

ಜಿಲ್ಲೆಯ ಹಾಡಿಗಳು, ಗಿರಿಜನರು ವಾಸಿಸುವ ಪ್ರದೇಶಗಳಲ್ಲಿ ವಿಶೇಷ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ ಎಂದು ತಾಲ್ಲೂಕು ವೈದ್ಯಾಧಿಕಾರಿಗಳಿಗೆ ಡಾ.ಕೆ. ಮೋಹನ್ ಸೂಚಿಸಿದರು.

ಒಂದು ವೇಳೆ ರೋಗಿಗಳಲ್ಲಿ ನಿಫಾ ವೈರಸ್ ಕಂಡು ಬಂದಲ್ಲಿ ಎಲ್ಲಾ ಬೆಂಬಲಾತ್ಮಕ ಔಷಧ ಮೂಲಕ ಉಪಚರಿಸಲಾಗುವುದು. ಅಗತ್ಯವಿರುವ ಹೆಚ್ಚಿನ ಚಿಕಿತ್ಸೆಯನ್ನು ನೀಡಲಾಗುವುದು ಎಂದು ಹೇಳಿದರು. 

ನಿಫಾ ವೈರಸ್ ಹರಡುವಿಕೆ, ರೋಗದ ಲಕ್ಷಣಗಳು, ಅಗತ್ಯ ಮುನ್ನೆಚ್ಚರಿಕೆ ಕುರಿತು ಜಿಲ್ಲಾ ಸರ್ವೇಕ್ಷಣಾ ಘಟಕದ ವೈದ್ಯಾಧಿಕಾರಿ ಡಾ.ಶಿವಕುಮಾರ್ ಅವರು ಸಭೆಯಲ್ಲಿ ಮಾಹಿತಿ ನೀಡಿ, ಸಾರ್ವಜನಿಕರಲ್ಲಿ ಈ ಲಕ್ಷಣಗಳು ಕಂಡು ಬಂದಲ್ಲಿ ಸೂಕ್ತ ಚಿಕಿತ್ಸೆ ಪಡೆಯುವಂತೆ ತಿಳಿಸಿದರು.

ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಆನಂದ್, ಜಿಲ್ಲಾ ಕ್ಷಯ ರೋಗ ನಿಯಂತ್ರಣಾಧಿಕಾರಿ ಡಾ.ಎ.ಸಿ. ಶಿವಕುಮಾರ್ ಹಾಜರಿದ್ದರು. 

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 1

  Sad
 • 0

  Frustrated
 • 0

  Angry

Comments:

0 comments

Write the first review for this !