ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೂಕ್ಷ್ಮ ಪ್ರದೇಶಗಳ ಜನರನ್ನು ಸ್ಥಳಾಂತರಿಸಲು ಜಿಲ್ಲಾಡಳಿತ ಕ್ರಮ

ಮುಂಜಾಗೃತೆ ದೃಷ್ಟಿಯಿಂದ ಅನೀಸ್ ಕಣ್ಮಣಿ ಜಾಯ್ ಅಧಿಕಾರಿಗಳಿಗೆ ಸೂಚನೆ
Last Updated 16 ಜೂನ್ 2019, 14:46 IST
ಅಕ್ಷರ ಗಾತ್ರ

ಮಡಿಕೇರಿ: ಭೂ ಸರ್ವೇಕ್ಷಣಾ ಇಲಾಖೆ ಗುರುತಿಸಿರುವ ಜಿಲ್ಲೆಯ ಸೂಕ್ಷ್ಮ ಪ್ರದೇಶಗಳಲ್ಲಿನಜನರನ್ನು ಮಳೆಗಾಲ ಮುಗಿಯುವವರೆಗೆ ಮುಂಜಾಗ್ರತೆದೃಷ್ಟಿಯಿಂದ ಪುನರ್ವಸತಿ ಕೇಂದ್ರಗಳಿಗೆಸ್ಥಳಾಂತರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶನಿವಾರ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ರಾಜ್ಯ ನೈಸರ್ಗಿಕವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ ಜೂನ್ 20 ರಿಂದ ಜಿಲ್ಲೆಯಲ್ಲಿ ಸಾಧಾರಣಮುಂಗಾರು ಮಳೆ ಆರಂಭವಾಗಲಿದ್ದು, ಅಗತ್ಯ ಮುನ್ನೆಚ್ಚರಿಕೆಕ್ರಮಕೈಗೊಳ್ಳಬೇಕು ಎಂದು ಸೂಚಿಸಿದರು.

ಇದೇ 19 ರಿಂದ ಅಧಿಕಾರಿಗಳು ತುರ್ತು ಪರಿಹಾರ ಕಾರ್ಯ ಕ್ರಮ ಕೈಗೊಳ್ಳಬೇಕು, ಜನರಸುರಕ್ಷಿತ ದೃಷ್ಟಿಯಿಂದ ಜಿಲ್ಲಾಡಳಿತದ ವತಿಯಿಂದ ತೆರೆಯಲಾಗಿರುವಪುನರ್ವಸತಿ ಕೇಂದ್ರಗಳಿಗೆ ಸ್ಥಳಾಂತರಿಸುವುದು ಎಂದು ತಿಳಿಸಿದರು.

ಪುನರ್ವಸತಿ ಸಂಬಂಧ ಪ್ರಥಮ ಹಾಗೂದ್ವಿತೀಯ ಪಟ್ಟಿಯಲ್ಲಿರುವ ಅರ್ಹ ಪಲಾನುಭವಿಗಳಿಗೆಮುಂದಿನ ಮೂರು ತಿಂಗಳಿಗೆ ಅವಶ್ಯವಿರುವ ಮನೆ ಬಾಡಿಗೆ ಹಣವನ್ನು ಎರಡು ದಿನಗಳಲ್ಲಿ ಪಾವತಿಸಲು ಕ್ರಮಕೈಗೊಂಡು ವರದಿ ನೀಡುವಂತೆಅಪರ ಜಿಲ್ಲಾಧಿಕಾರಿ ಟಿ. ಜವರೇಗೌಡಗೆ ಸೂಚಿಸಿದರು.

ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಯಾವುದೇ ತೊಂದರೆಯಾಗದಂತೆ ವಿದ್ಯಾರ್ಥಿನಿಲಯಗಳಲ್ಲಿ ವಸತಿ ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆಸಂಬಂಧಪಟ್ಟ ಅನೀಸ್ ಕಣ್ಮಣಿ ಜಾಯ್ ಸೂಚಿಸಿದರು.

ಮಳೆಯಿಂದ ಉಂಟಾಗಬಹುದಾದಅನಾಹುತಗಳನ್ನು ಸಮರ್ಥವಾಗಿ ತಡೆಯುವ ನಿಟ್ಟಿನಲ್ಲಿ ಅಗತ್ಯವಿರುವ ಜೀವ ರಕ್ಷಕ ಜಾಕೆಟ್, ರೈನ್‍ಕೊಟ್, ಟಾರ್ಪಲ್‍ಗಳ ದಾಸ್ತಾನು ಮಾಡಿಕೊಂಡು ಅಗತ್ಯ ಬಿದ್ದಲ್ಲಿ ಬಳಸಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಲಕ್ಷ್ಮಿ ಪ್ರಿಯಾ ಮಾತನಾಡಿ, ಈಗಾಗಲೇ 42 ಪುನರ್ವಸತಿ ಕೇಂದ್ರಗಳ ನಿರ್ವಹಣೆಗೆ ಬೇಕಾಗಿರುವ ಎಲ್ಲಾ ಅಗತ್ಯ ಸಿದ್ಧತೆಗಳನ್ನುಮಾಡಿಕೊಳ್ಳಲಾಗಿದ್ದು, ಅಧಿಕಾರಿಗಳು ತಮ್ಮ ವ್ಯಾಪ್ತಿಯ ಸೂಕ್ಷ್ಮ ಪ್ರದೇಶದ ಜನರನ್ನು ಪುನರ್ವಸತಿ ಕೇಂದ್ರಗಳಿಗೆ ಸ್ಥಳಾಂತರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಸಾರ್ವಜನಿಕರಲ್ಲಿ ಅರಿವು ಮತ್ತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ತುರ್ತು ಸಂದರ್ಭದಲ್ಲಿ ವಹಿಸಬೇಕಾದ ಮುನ್ನೆಚ್ಚರಿಕೆಹಾಗೂ ಸುರಕ್ಷತಾ ಕ್ರಮಗಳ ಕುರಿತ ಬಿತ್ತಿ ಪತ್ರಗಳನ್ನು ಜಿಲ್ಲಾಧಿಕಾರಿ ಅನೀಸ್‌ಕಣ್ಮಣಿ ಜಾಯ್ ಅನಾವರಣಗೊಳಿಸಿದರು.

ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ಗುಡೂರು ಭೀಮಸೇನ್, ಭೂ ದಾಖಲೆಗಳ ಉಪ ನಿರ್ದೇಶಕರ ಶ್ರೀನಿವಾಸ್, ಭೂ ದಾಖಲೆಗಳ ಸಹಾಯಕ ನಿರ್ದೇಶಕರಾದ ಶಹಬುದ್ದೀನ್ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT